ಪಿಕ್‌ಅಪ್ ವಾಹನ ಪಲ್ಟಿ: ಟ್ರಾಫಿಕ್ ಜಾಮ್
Saturday, August 22, 2026
ಮೂಡುಬಿದಿರೆ: ಜನರೇಟರ್ ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಕೊಡ್ಯಡ್ಕ ಮಿತ್ತಬೈಲ್ ಬಳಿ ಮಾರ್ಗಮಧ್ಯದಲ್ಲೇ ಪಲ್ಟಿಯಾದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು.
ಪಾಲಡ್ಕ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಪಿಕ್‌ಅಪ್ ವಾಹನವು ಕೊಡ್ಯಡ್ಕ ಮಿತ್ತಬೈಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾಗಿ ಬಿದ್ದಿದೆ.
ವಾಹನ ಮಾರ್ಗಮಧ್ಯದಲ್ಲೇ ಪಲ್ಟಿಯಾಗಿ ಬಿದ್ದಿದ್ದರಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿ ಟ್ರಾಫಿಕ್ ಜಾಮ್ ಸಂಭವಿಸಿತು.
ಸ್ಥಳಕ್ಕೆ ಪೊಲೀಸರು ಸೇರಿದಂತೆ ಸಂಬಂಧಪಟ್ಟವರು ಸೇರಿ ಪಲ್ಟಿಯಾಗಿದ್ದ ವಾಹನವನ್ನು ತೆರವುಗೊಳಿಸಿದರು. ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
