ಮೂಡುಬಿದಿರೆ: ಶುಕ್ರವಾರ ಸಂಜೆ ಈಚರ್ ಕ್ಯಾಂಟರ್ ಲಾರಿಯೊಂದು ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಸಂದಭ೯ ದನಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಒಂದು ದನ ಮೃತಪಟ್ಟಿದೆ. ಎರಡು ದನಗಳು ಗಂಭೀರವಾಗಿ ಗಾಯಗೊಂಡಿವೆ.
ಗಂಭೀರವಾಗಿ ಗಾಯಗೊಂಡಿರುವ ಎರಡು ದನಗಳ ಸ್ಥಿತಿ ಚಿಂತಾಜನಕವಾಗಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.