ವಿದ್ಯಾರ್ಥಿಗಳನ್ನು ಶ್ರುತಿ ಬದ್ಧಗೊಳಿಸುವುದೇ ಶಿಕ್ಷಣದ ಮುಖ್ಯ ಉದ್ದೇಶ: ಡಾ. ಆಳ್ವ
ಆಳ್ವಾಸ್ ವಿಜ್ಞಾನ ವಿಭಾಗದ ‘ಪಾಲಕ-ಶಿಕ್ಷಕ ಸಮಾವೇಷ’
ಪದವಿಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ₹28.62 ಕೋಟಿ
ವಿದ್ಯಾರ್ಥಿಗಳ ಆರ್ಥಿಕ ಹಿನ್ನೆಲೆ ಅವರ ಶಿಕ್ಷಣಕ್ಕೆ ಎಂದಿಗೂ ಅಡ್ಡಿಯಾಗಬಾರದು ಎಂಬ ಆಶಯದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪ್ರತಿ ವರ್ಷ ಸುಮಾರು ₹70–80 ಕೋಟಿ ಮೊತ್ತವನ್ನು ವಿದ್ಯಾರ್ಥಿವೇತನ ಹಾಗೂ ಶೈಕ್ಷಣಿಕ ನೆರವಿಗಾಗಿ ವಿನಿಯೋಗಿಸುತ್ತಿದೆ. ಇದರಲ್ಲಿ ಪದವಿಪೂರ್ವ ಶಿಕ್ಷಣದ ವಿದ್ಯಾರ್ಥಿಗಳಿಗಾಗಿ ₹28.62 ಕೋಟಿ ಮೊತ್ತವನ್ನು ಕೇವಲ ವಿದ್ಯಾರ್ಥಿವೇತನಕ್ಕಾಗಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಕಾಲೇಜಿನ ಶೈಕ್ಷಣಿಕ ವ್ಯವಸ್ಥೆ, ವಿದ್ಯಾರ್ಥಿಗಳ ಪ್ರಗತಿ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ವಿದ್ಯಾರ್ಥಿ ಕಲ್ಯಾಣ ಹಾಗೂ ಪಾಲಕರು–ಶಿಕ್ಷಕರ ಸಮನ್ವಯ ಕುರಿತುಫ ಚರ್ಚಿಸಲಾಯಿತು.
ವಿಜ್ಞಾನ ವಿಭಾಗದ 2219 ವಿದ್ಯಾರ್ಥಿಗಳ ಪಾಲಕರು ಹಾಗೂ ಬೋಧಕ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಚರ‍್ಯ ಮೊಹಮ್ಮದ್ ಸದಾಕತ್, ವಿವಿಧ ಶೈಕ್ಷಣಿಕ ವಿಭಾಗಗಳ ಮುಖ್ಯಸ್ಥರು ಇದ್ದರು.
ಕನ್ನಡ ವಿಭಾಗದ ಮುಖ್ಯಸ್ಥ ವೇಣುಗೋಪಾಲ ಶೆಟ್ಟಿ ಕಾಯ೯ಕ್ರಮ ನಿರೂಪಿಸಿದರು.
16 ವಿಭಾಗಗಳಲ್ಲಿ ಸಮಗ್ರ ಶಿಕ್ಷಣ–ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ
ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 16 ವಿಭಾಗಗಳಲ್ಲಿ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಮಗ್ರ ತರಬೇತಿ ನೀಡಲಾಗುತ್ತಿದೆ. ಎನ್‌ಸಿಇಆರ್‌ಟಿ ಪಠ್ಯಕ್ರಮದೊಂದಿಗೆ ಸಿಇಟಿ, ನೀಟ್, ನಾಟಾ, ಎನ್‌ಡಿಎ, ಸಿಎ, ಸಿಎಸ್, ಯುಪಿಎಸ್ಸಿ ಹಾಗೂ ಕ್ಲಾಟ್ ಸೇರಿದಂತೆ ವಿವಿಧ ಪ್ರವೇಶ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ತರಬೇತಿ ಒದಗಿಸಲಾಗುತ್ತಿದೆ ಎನ್ನುತ್ತಾರೆ ಡಾ. ಎಂ. ಮೋಹನ ಆಳ್ವ.
