ನಡ್ಯೋಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ನಡ್ಯೋಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ: ನಡ್ಯೋಡಿ ಸರಕಾರಿ ಪ್ರಾಥಮಿಕ ಶಾಲೆ ಮಾರ್ಪಾಡಿ ಇಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. 

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ ಎಸ್. ಆಚಾರ್ಯ ಧ್ವಜಾರೋಹಣ ನೆರವೇರಿಸಿದರು. 

ಲಯನ್ಸ್ ಕ್ಲಬ್ ಅಲಂಗಾರು ಇದರ ಅಧ್ಯಕ್ಷ ರೋಕಿ ಮಸ್ಕರೇನಸ್, ಮಾಜಿ ಲಯನ್ ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತಾವ್ರೊ, ನಡ್ಯೋಡಿ ಶಾಲೆ ಸಲಹಾ ಸಮಿತಿ ಕಾರ್ಯದರ್ಶಿ ಪ್ರಸನ್ನ ಹೆಗ್ಡೆ, ಮಾಜಿ ಅಧ್ಯಕ್ಷ ಗಂಗಾಧರ ಬಂಗೇರ,  ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಯತೀಶ್ ಕೋಟ್ಯಾನ್, ನಡ್ಯೋಡಿ ದೈವಸ್ಥಾನ ಸೇವಾ ಸಮಿತಿ ಕಾರ್ಯದರ್ಶಿ ವಿಶ್ವನಾಥ ಕೋಟ್ಯಾನ್, ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ರೈತ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಮಂಜುಶ್ರೀ ಭಜನಾ ಮಂದಿರದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಮರಿಯಾಡಿ ಜುಮ್ಮಾ ಮಸೀದಿಯ ಹಾಮ್ಮದ್ ಬಿ.ಕೆ,  ಮಹಿಳಾ ಮಂಡಲದ ಕಾರ್ಯದರ್ಶಿ ಹೇಮಾವತಿ ಆರ್.ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. 

ಮುಖ್ಯ ಶಿಕ್ಷಕಿ ಉಷಾಲತಾ ಹೆಗ್ಡೆ ನಿರೂಪಿಸಿದರು. ಜೆನೆಟ್ ಲೋಬೊ ಸ್ವಾಗತಿಸಿದರು. ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಅಲಂಗಾರು ಲಯನ್ಸ್ ಕ್ಲಬ್ ವತಿಯಿಂದ ಬಹುಮಾನ ವಿತರಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article