ಮೊದಲ ಬ್ಯಾಚ್‌ನಲ್ಲೇ ಶೇ.100 ಫಲಿತಾಂಶ ದಾಖಲಿಸಿದ ಸಂತ ಫಿಲೋಮಿನಾ ಕಾಲೇಜಿನ ಎಂಸಿಎ ವಿಭಾಗ: ಉದ್ಯಮಾಧಾರಿತ ಪಠ್ಯಕ್ರಮ, ತಂತ್ರಜ್ಞಾನ ಆಧಾರಿತ ಶಿಕ್ಷಣ ಮತ್ತು ಗುಣಮಟ್ಟದ ಬೋಧನೆಗೆ ಮತ್ತೊಂದು ಹೆಗ್ಗುರುತು
ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, ವಿಭಾಗದ ಶೈಕ್ಷಣಿಕ ಗುಣಮಟ್ಟ, ಅಧ್ಯಾಪಕರ ಸಮರ್ಪಿತ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಈ ಸಾಧನೆ ಸಾಕ್ಷಿಯಾಗಿದೆ.
AICTE ಅನುಮೋದಿತ ಈ ಸ್ನಾತಕೋತ್ತರ ಕೋರ್ಸ್, ಕಾಲೇಜಿನ ಸ್ವಾಯತ್ತ ಪಠ್ಯಕ್ರಮದಡಿ ಉದ್ಯಮದ ಇಂದಿನ ಅಗತ್ಯಗಳಿಗೆ ಅನುಗುಣವಾಗಿ ರೂಪುಗೊಂಡಿದ್ದು, ಕಾಲಕಾಲಕ್ಕೆ ನವೀಕರಿಸಲಾಗುತ್ತಿದೆ. ಸಾಂಪ್ರದಾಯಿಕ ಬೋಧನೆಯ ಜೊತೆಗೆ ಪ್ರಾಯೋಗಿಕ ಕಲಿಕೆ, ಸಮಸ್ಯೆ ಪರಿಹಾರ ಸಾಮರ್ಥ್ಯ, ತಾಂತ್ರಿಕ ಪರಿಣತಿ ಮತ್ತು ಉದ್ಯೋಗ ಕೌಶಲ್ಯಗಳಿಗೆ ಸಮಾನ ಆದ್ಯತೆ ನೀಡಲಾಗುತ್ತಿದೆ.
ವಿದ್ಯಾರ್ಥಿಗಳಿಗೆ SWAYAM NPTEL ವೇದಿಕೆಗಳ ಮೂಲಕ ರಾಷ್ಟ್ರೀಯ ಮಟ್ಟದ ಆನ್‌ಲೈನ್ ಕೋರ್ಸ್‌ಗಳನ್ನು ಅಭ್ಯಾಸ ಮಾಡಿ ಕ್ರೆಡಿಟ್ ವರ್ಗಾವಣೆ (Credit Transfer) ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಇದರಿಂದ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಪಠ್ಯಕ್ರಮಗಳನ್ನು ಅಧ್ಯಯನ ಮಾಡುವ ಮೂಲಕ ತಮ್ಮ ಶೈಕ್ಷಣಿಕ ಹಾಗೂ ತಾಂತ್ರಿಕ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಲು ಸಾಧ್ಯವಾಗುತ್ತಿದೆ.
ವಿಭಾಗವು ಪ್ರತ್ಯೇಕ ಕಟ್ಟಡ, ಅತ್ಯಾಧುನಿಕ ಕಂಪ್ಯೂಟರ್ ಪ್ರಯೋಗಾಲಯಗಳು, ಡಿಜಿಟಲ್ ಕಲಿಕಾ ಸೌಲಭ್ಯಗಳು ಹಾಗೂ ಅನುಭವಿ ಮತ್ತು ಅರ್ಹ ಅಧ್ಯಾಪಕರ ತಂಡವನ್ನು ಹೊಂದಿದೆ. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ತಾಂತ್ರಿಕ ಕಾರ್ಯಾಗಾರಗಳು, ಸಾಫ್ಟ್ ಸ್ಕಿಲ್ಸ್ ತರಬೇತಿ, ಪ್ರಮಾಣಪತ್ರ (Certification) ಕೋರ್ಸ್‌ಗಳು, ಕೋಡಿಂಗ್ ಅಭ್ಯಾಸಗಳು, ಹ್ಯಾಕಥಾನ್‌ಗಳು, ಉದ್ಯಮ ತಜ್ಞರ ಉಪನ್ಯಾಸಗಳು ಹಾಗೂ ವಿವಿಧ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ಆಯೋಜಿಸಲಾಗುತ್ತಿದೆ.
ಈ ಕೋರ್ಸ್‌ನ ಪ್ರಮುಖ ಆಕರ್ಷಣೆಯೆಂದರೆ ಕಡ್ಡಾಯ ಇಂಟರ್ನ್‌ಶಿಪ್ ಹಾಗೂ ನಾಲ್ಕನೇ ಸೆಮಿಸ್ಟರ್‌ನಲ್ಲಿ ಸಂಪೂರ್ಣ ಉದ್ಯಮಾಧಾರಿತ (Industry-Oriented) ಪ್ರಮುಖ ಪ್ರಾಜೆಕ್ಟ್. ವಿದ್ಯಾರ್ಥಿಗಳು ಕೈಗಾರಿಕಾ ಸಂಸ್ಥೆಗಳೊಂದಿಗೆ ನೇರವಾಗಿ ಕಾರ್ಯನಿರ್ವಹಿಸಿ, ನೈಜ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಅವಕಾಶವನ್ನು ಪಡೆಯುತ್ತಾರೆ. ಇದರಿಂದ ಪದವಿ ಪೂರ್ಣಗೊಳಿಸುವ ವೇಳೆಗೆ ಉದ್ಯಮದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಪ್ರಾಯೋಗಿಕ ಅನುಭವ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುತ್ತಾರೆ.
ವಿದ್ಯಾರ್ಥಿಗಳ ಭವಿಷ್ಯದ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು, 2026-27ನೇ ಶೈಕ್ಷಣಿಕ ವರ್ಷದಿಂದ MCA ಕಾರ್ಯಕ್ರಮದಲ್ಲಿ ಎರಡು ನೂತನ ವಿಶೇಷೀಕರಣಗಳನ್ನು ಆರಂಭಿಸಲಾಗುತ್ತಿದೆ. ಅವುಗಳೆಂದರೆ Artificial Intelligence & Data Science ಹಾಗೂ Cyber Security, Ethical Hacking & Digital Forensics. ಈ ವಿಶೇಷೀಕರಣಗಳು ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪರಿಣತಿ ಹೊಂದಲು ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳನ್ನು ಪಡೆಯಲು ನೆರವಾಗಲಿವೆ.
ಈ ಸಾಧನೆ ಕುರಿತು ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ರೆ ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು, "ಮೊದಲ ಬ್ಯಾಚ್‌ನಲ್ಲೇ ಶೇ.100 ಫಲಿತಾಂಶ ದಾಖಲಿಸಿರುವುದು ವಿದ್ಯಾರ್ಥಿಗಳ ಪರಿಶ್ರಮ, ಅಧ್ಯಾಪಕರ ಬದ್ಧತೆ ಹಾಗೂ ಕಾಲೇಜಿನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯ ಪ್ರತಿಫಲವಾಗಿದೆ. ಸ್ವಾಯತ್ತ ಪಠ್ಯಕ್ರಮದ ಮೂಲಕ ಉದ್ಯಮದ ಅಗತ್ಯಗಳಿಗೆ ಅನುಗುಣವಾದ ಶಿಕ್ಷಣವನ್ನು ನೀಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಪರಿಚಯಿಸಲಾಗುತ್ತಿರುವ ಹೊಸ ವಿಶೇಷೀಕರಣಗಳು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ತೆರೆದಿಡಲಿವೆ," ಎಂದು ಹೇಳಿದರು.
MCA ಕಾರ್ಯಕ್ರಮ ಸಂಯೋಜಕರಾದ ಡಾ. ವಿನಯಚಂದ್ರ ಅವರು ಮಾತನಾಡಿ, "ಈ ಸಾಧನೆಗೆ ವಿದ್ಯಾರ್ಥಿಗಳ ಶಿಸ್ತು, ಅಧ್ಯಾಪಕರ ಮಾರ್ಗದರ್ಶನ ಹಾಗೂ ಉದ್ಯಮಾಧಾರಿತ ಕಲಿಕಾ ವಿಧಾನಗಳೇ ಪ್ರಮುಖ ಕಾರಣ. ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗಲಿರುವ Artificial Intelligence & Data Science ಹಾಗೂ Cyber Security, Ethical Hacking & Digital Forensics ವಿಶೇಷೀಕರಣಗಳು ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಹೊಸ ದಿಕ್ಕನ್ನು ನೀಡಲಿವೆ," ಎಂದು ತಿಳಿಸಿದರು.
2026-27ನೇ ಸಾಲಿನ ಒಅಂ ಪ್ರವೇಶಗಳು ಪ್ರಾರಂಭಗೊಂಡಿದ್ದು, ಐಟಿ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯವನ್ನು ಕನಸು ಕಾಣುವ ವಿದ್ಯಾರ್ಥಿಗಳಿಗೆ ಸೇಂಟ್ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಅತ್ಯುತ್ತಮ ಆಯ್ಕೆಯಾಗಿದೆ.

