ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ‘ಫಿಲೋ ಪ್ರತಿಭಾ-2026’ ಸಮಾರೋಪ
ವೇದಿಕೆಯಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಪ್ರಕಾಶ್ ಬಿ., ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಆಂಥೋನಿ ಒಲಿವೇರಾ ಹಾಗೂ ‘ಫಿಲೋ ಪ್ರತಿಭಾ-2026’ರ ಸಂಯೋಜಕಿ ಸುಮಾ ಪಿ.ಆರ್ ಉಪಸ್ಥಿತರಿದ್ದರು.
ಈ ಬಾರಿಯ ‘ಫಿಲೋ ಪ್ರತಿಭಾ-2026’ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪಡೆದುಕೊಂಡಿತು. ಸುಳ್ಯದ ಸ್ನೇಹ ಪ್ರೌಢ ಶಾಲೆ ದ್ವಿತೀಯ ಸ್ಥಾನವನ್ನು ಹಾಗೂ ಪ್ರಗತಿ ವಿದ್ಯಾ ಸಂಸ್ಥೆ ಕಾಣಿಯೂರು ತೃತೀಯ ಸ್ಥಾನವನ್ನು ಪಡೆದುಕೊಂಡಿತು.
ದಕ್ಷಿಣ ಕನ್ನಡ ಜಿಲ್ಲೆಯ 37 ಪ್ರೌಢಶಾಲೆಗಳ 750ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ರಸಪ್ರಶ್ನೆ, ಇಂಗ್ಲಿಷ್ ವಿಚಾರ ಸಂಕಿರಣ, ಪೆನ್ಸಿಲ್ ಸ್ಕೆಚ್, ಮಣ್ಣಿನ ಮಾದರಿ ತಯಾರಿ, ವಿಜ್ಞಾನ ಮಾದರಿ ತಯಾರಿ, ದೇಶ ಭಕ್ತಿ ಗಾಯನ, ಕೊಲಾಜ್ ತಯಾರಿಕೆ, ತ್ಯಾಜ್ಯದಿಂದ ಉಪಯುಕ್ತ ವಸ್ತು ತಯಾರಿ, ಫೇಸ್ ಪೈಂಟಿಂಗ್, ಛದ್ಮ ವೇಷ, ಲಾಂಚಿಂಗ್ ಪ್ರಾಡಕ್ಟ್, ಕನ್ನಡ ಕಂಠ ಪಾಠ, ರಂಗೋಲಿ ಹಾಗೂ ಜಾನಪದ ನೃತ್ಯ ಹೀಗೆ 14 ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕರಾದ ಉಷಾ ಎ. ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಫಿಲೋ ಪ್ರತಿಭಾ-2026ರ ಸಂಯೋಜಕ ರೋಹಿತ್ ಕುಮಾರ್ ಟಿ. ವಂದಿಸಿದರು.

