ಪುತ್ತೂರು ಚಲೋ ಯಶಸ್ಸಿಗಾಗಿ ಶ್ರಮಿಸಿ: ಸತೀಶ್ ಕುಂಪಲ

ಪುತ್ತೂರು ಚಲೋ ಯಶಸ್ಸಿಗಾಗಿ ಶ್ರಮಿಸಿ: ಸತೀಶ್ ಕುಂಪಲ


ಪುತ್ತೂರು: ದರ್ಬೆ ಪ್ರಕರಣದಲ್ಲಿ ಪೊಲೀಸ್ ಇಲಾಖೆಯಿಂದ ನಿಷ್ಪಕ್ಷಪಾತ ತನಿಖೆ ನಡೆಸಲಾಗಿಲ್ಲ. ಪ್ರಕರಣ ದಾಖಲಿಸುವ ನಿಟ್ಟಿನಲ್ಲಿಯೂ ಸಮರ್ಪಕ ರೀತಿಯಲ್ಲಿ ವರ್ತಿಸಿಲ್ಲ ಎಂಬ ಹಿನ್ನಲೆಯಲ್ಲಿ ಆ.31ರಂದು ಆಯೋಜಿಲಾದ ಪುತ್ತೂರು ಚಲೋ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗುವಂತೆ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. 

ಪುತ್ತೂರು ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಕ್ಷೇತ್ರದ ಎಲ್ಲ ಬೂತ್‌ಗಳಿಂದ ಕಾರ್ಯಕರ್ತರು ಭಾಗವಹಿಸಬೇಕು. ಸಾರ್ವಜನಿಕ ವಲಯದಿಂದ ಜನ ಬರುವಂತೆ ಕಾರ್ಯಕರ್ತರು ಪ್ರಯತ್ನಿಸಬೇಕು ಎಂದವರು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು, ಪಕ್ಷದ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಕಲ್ಲಿಮಾರ್, ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್, ಪಕ್ಷದ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಗೋಪಾಲಕೃಷ್ಣ ಹೇರಳೆ, ಯತೀಶ್ ಆರ್ವಾರ್, ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವರ್ಣಲತಾ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article