ಪುತ್ತೂರು ಚಲೋಗೆ ಬಿಜೆಪಿ ಸಂಪೂರ್ಣ ಬೆಂಬಲ

ಪುತ್ತೂರು ಚಲೋಗೆ ಬಿಜೆಪಿ ಸಂಪೂರ್ಣ ಬೆಂಬಲ

ಪುತ್ತೂರು: ಹಿಂದೂ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.  

ದರ್ಬೆ ಪ್ರಕರಣದಲ್ಲಿ ಅಂಗಡಿ ಮಾಲಕರು ಹಾಗೂ ಕುಟುಂಬದ ಸದಸ್ಯರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ಆದರೆ ಜೀಪಿಗೆ ನುಗ್ಗಿ ಹಲ್ಲೆ ಮಾಡಿದ ಇಬ್ಬರು ವ್ಯಕ್ತಿಗಳ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸುವ ಬದಲು ಕರ್ತವ್ಯಕ್ಕೆ ಅಡ್ಡಿ ಎಂದು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರ ಹಿಂದೇಟು ನಡೆ ಅನುಮಾನಕ್ಕೆ ಕಾರಣವಾಗಿದೆ. ರಾಜಕೀಯ ಒತ್ತಡಕ್ಕೆ ಪೊಲೀಸರು ಮಣಿಯಬಾರದು ಎಂದು ಅವರು ಆಗ್ರಹಿಸಿದರು. 

ಈ ಘಟನೆ ನಡೆದ ಅರ್ಧ ಗಂಟೆಯಲ್ಲಿ ನೂರಾರು ಮಂದಿ ಸ್ಥಳಕ್ಕೆ ಬಂದಿದ್ದಾರೆ. ಇವರನ್ನು ಕರೆಸಿದ್ದು ಯಾರು. ಪೋಲೀಸ್ ಜೀಪ್ ಒಳಗೆ ನುಗ್ಗಿ ಹಲ್ಲೆ ಮಾಡಿರುವುದು ಸಣ್ಣ ವಿಚಾರವೇ ಎಂದು ಪ್ರಶ್ನಿಸಿದ ಅವರು  ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ, ಅಮಳ ರಾಮಚಂದ್ರ ಮುಂತಾದವರು  ಇದೊಂದು ಸಣ್ಣ ವಿಷಯವೆಂಬಂತೆ ಬಿಂಬಿಸುತ್ತಿದ್ದಾರೆ. ಇದರ ಬಗ್ಗೆ ತನಿಖೆ ನಡೆಯಬೇಕು ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಸ್ವರ್ಣಲತಾ ಹೆಗ್ಡೆ, ಪರ್ಲಡ್ಕ ಸತೀಶ್ ನಾಯಕ್, ಮಹೇಶ್ ರೈ ಕೇರಿ, ಶಶಿಧರ್ ನಾಯಕ್, ಲೋಕೇಶ್ ಚಾಕೊಟೆ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article