ಪೊಲೀಸ್ ಪಥಸಂಚಲನ
Monday, August 24, 2026
ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತಾ ಭಾವನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆ.24 ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಗಿರುತ್ತದೆ.
ಸ್ವಾಭಾವಿಕವಾಗಿ ಈದ್ ಮಿಲಾದ್ ಹಬ್ಬದ ದಿನ, ಹಬ್ಬದ ಪ್ರಯುಕ್ತ ಬಹುತೇಕ ಅಂಗಡಿಗಳು ಮುಚ್ಚಿರುತ್ತದೆ. ಇದರ ಹೊರತಾಗಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡುವುದಕ್ಕೆ ಆಸ್ಪದ ನೀಡದಂತೆ ಅಗತ್ಯ ಪೊಲೀಸ್ ಭದ್ರತೆ ಏರ್ಪಡಿಸಿಲಾಗಿದೆ.
ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿರುತ್ತಾರೆ. ಆದರೆ ಪೊಲೀಸರು ಈ ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂಬುದಾಗಿ ವದಂತಿಗಳನ್ನು ಹರಡಲಾಗುತ್ತಿದೆ. ಇದು ಸತ್ಯಕ್ಕೆ ದೂರವಾಗಿದ್ದು, ಈ ಹಿಂದಿನ ಹಲವು ಪ್ರಕರಣಗಳಲ್ಲಿ ಜಾತಿ, ಧರ್ಮ, ರಾಜಕೀಯ ಪ್ರಭಾವಗಳನ್ನು ಪರಿಗಣಿಸದೇ ಪೊಲೀಸರು ನೋಟಿಸ್ ನೀಡಿದ್ದು, ಈ ಬಗ್ಗೆ ಯಾರಾದರೂ ಚರ್ಚಿಸಲು ಬಯಸಿದಲ್ಲಿ ಬಂದು ಮುಕ್ತವಾಗಿ ಚರ್ಚಿಸಬಹುದಾಗಿದೆ.