ಪುತ್ತೂರಿಗೆ ಐಜಿಪಿ ಭೇಟಿ
Tuesday, August 25, 2026
ಪುತ್ತೂರು: ಈದ್‌ಮಿಲಾದ್ ಹಬ್ಬದ ಹಿನ್ನಲೆ ಮತ್ತು ಹಿಂದೂ ಜಾಗರಣಾ ವೇದಿಕೆ ನೀಡಿರುವ ಸ್ವಯಂಪ್ರೇರಿತ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಪರಿಸ್ಥಿತಿಯ ಅವಲೋಕನಕ್ಕಾಗಿ ಮಂಗಳವಾರ ಪಶ್ಚಿಮವಲಯ ಮಹಾ ಪೊಲೀಸ್ ನಿರೀಕ್ಷಕ (ಐಜಿಪಿ) ಅಮಿತ್ ಸಿಂಗ್ ಅವರು ಪುತ್ತೂರಿಗೆ ಭೇಟಿ ನೀಡಿದರು.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಪುತ್ತೂರಿನ ದರ್ಬೆಯ ನಿರೀಕ್ಷಣಾ ಮಂದಿರಕ್ಕೆ ಆಗಮಿಸಿದ ಐಜಿಪಿ ಅಮಿತ್ ಸಿಂಗ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮತ್ತು ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ ಅವರಿಂದ ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಪರಿಸ್ಥಿತಿ ಮತ್ತು ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿದರು.