ಬಿಳಿನೆಲೆಯಲ್ಲಿ ಗಿಡ ನೆಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ 3ನೇ ವರ್ಷದ ಸಂಭ್ರಮಾಚರಣೆ

ಬಿಳಿನೆಲೆಯಲ್ಲಿ ಗಿಡ ನೆಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ 3ನೇ ವರ್ಷದ ಸಂಭ್ರಮಾಚರಣೆ


ಸುಬ್ರಮಣ್ಯ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂರು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡ ನೆಡುವ ಮೂಲಕ ಸಂಭ್ರಮಾಚರಣೆ ನಡೆಯಿತು.


ಕಾರ್ಯಕ್ರಮವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರು, "ಗೃಹಲಕ್ಷ್ಮಿ ಯೋಜನೆಯು ಸಾವಿರಾರು ಮಹಿಳೆಯರ ಬದುಕಿಗೆ ಆರ್ಥಿಕ ಬಲ ನೀಡಿದ್ದು, ಅನೇಕ ಕುಟುಂಬಗಳಿಗೆ ಆಸರೆಯಾಗಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಈ ಯೋಜನೆ ಸಹಕಾರಿಯಾಗಿದೆ" ಎಂದು ಹೇಳಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಅವರು ಕಾರ್ಯಕ್ರಮವನ್ನು ಸ್ವಾಗತಿಸಿ, ನಿರೂಪಣೆ ನಡೆಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪುಷ್ಪಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ದಿನೇಶ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಕಳಿಗೆ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article