ಹರಿಹರ ಪಳ್ಳತ್ತಡ್ಕ: ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರ ಆಚರಣೆ
Saturday, August 29, 2026
ಸುಬ್ರಮಣ್ಯ: ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.29ರಂದು ಸೋಣ ಶನಿವಾರ ಆಚರಿಸಲಾಯಿತು.
ಆ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಶ್ರೀ ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
