ಅಪಘಾತ: ಬೈಕ್ ಸವಾರ ಸಾವು
Monday, August 3, 2026
ಸುಳ್ಯ: ಓಡಬಾಯಿಯಲ್ಲಿ ಜು. 31 ರಂದು ರಾತ್ರಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಾರೆತ್ತಡ್ಕ ನಿವಾಸಿ ಲವಕುಮಾರ್ (28) ಮೃತಪಟ್ಟ ಯುವಕ. ಅಪಘಾತ ಸಂಭವಿಸಿದ ತಕ್ಷಣ ಗಂಭೀರ ಸ್ಥಿತಿಯಲ್ಲಿದ್ದ ಲವಕುಮಾರ್ ಅವರನ್ನು ಸುಳ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕಾಶ್ ಅವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಥಮ ಚಿಕಿತ್ಸೆಯ ಬಳಿಕ ’ಲೈಫ್ ಕೇರ್’ ಆಂಬುಲೆನ್ಸ್ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ಹಾಗೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.