ಆಹಾರ ಮತ್ತು ಜೀವನ ಶೈಲಿಯಿಂದ ಆರೋಗ್ಯ ರಕ್ಷಣೆ ಸಾಧ್ಯ: ಯು.ಟಿ. ಖಾದರ್
ಕ್ಯಾನ್ಸರ್ ಮಹಾಜಾಗೃತಿ ಅಭಿಯಾನಕ್ಕೆ ಚಾಲನೆ
ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ರೋಟರಿ ಕ್ಲಬ್ ಸುಳ್ಯ ಮತ್ತು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಇಂದು ಆಯೋಜಿಸಿದ್ದ ’ಅರಿವೇ ಜೀವ - ಬದುಕು’ ಕ್ಯಾನ್ಸರ್ ಜಾಗೃತಿ ಮಹಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಾಗೃತಿ ಮೂಡಿಸುವುದೇ ಇದನ್ನು ತಡೆಗಟ್ಟುವ ಏಕೈಕ ಮಾರ್ಗ. ಇಂತಹ ಅಭಿಯಾನಗಳು ಪ್ರತಿ ಮನೆಗೂ ತಲುಪಬೇಕು ಎಲ್ಲಾ ಸಂಘ ಸಂಸ್ಥೆಗಳನ್ನು ಬಳಸಿಕೊಂಡು ಸಾವ೯ಜನಿಕರಿಗೆ ಕ್ಯಾನ್ಸರ್ ಮಾಹಿತಿ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಅವರು ಹೇಳಿದರು.
ಸುಳ್ಯ ರೋಟರಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ,ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ ಮುಖ್ಯ ಅತಿಥಿಯಾಗಿದ್ದರು.
ರೋಟರಿ ಕ್ಲಬ್ ಅಧ್ಯಕ್ಷೆ ಲತಾ ಮಧುಸೂದನ್ ಅಧ್ಯಕ್ಷತೆ ವಹಿಸಿದ್ದರು ವೇದಿಕೆಯಲ್ಲಿ ರೋಟರಿ ಶಾಲಾ ಸಂಚಾಲಕ ಪ್ರಭಾಕರನ್ ನಾಯರ್, ರೋಟರಿ ಕ್ಲಬ್ ಸದಸ್ಯ ಮಧುಸೂದನ್ ಕುಂಭಕೋಡು ಇದ್ದರು.
ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.