ಸುಳ್ಯದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಮ್ಮ ಗ್ರಾಮದ ಅಭಿವೃದ್ಧಿಗೆ ನಾವು ನೇತೃತ್ವ ವಹಿಸಬೇಕು

ಸುಳ್ಯದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಮ್ಮ ಗ್ರಾಮದ ಅಭಿವೃದ್ಧಿಗೆ ನಾವು ನೇತೃತ್ವ ವಹಿಸಬೇಕು


ಸುಳ್ಯ: ಭಾರತ ದೇಶದ ಘನತೆ, ಗೌರವ ಇಂದು ಜಗತ್ತಿನಲ್ಲಿ ಹೆಚ್ಚಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಸಾಧನೆ, ಬದಲಾವಣೆಯ ಅವಲೋಕನ ಆಗಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.

ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿರಿಯರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ ದೇಶಕ್ಕಾಗಿ ನಾವೇನು ಮಾಡಬಹುದು ಎಂಬುದನ್ನು ಪ್ರತಿಯೊಬ್ಬರೂ ಯೋಚನೆ ಮಾಡಬೇಕು, ನಮ್ಮ ಗ್ರಾಮದ ಅಭಿವೃದ್ಧಿಗೆ ನಾವು ನೇತೃತ್ವ ವಹಿಸಬೇಕು ಎಂದ ಅವರು ಭ್ರಷ್ಟಾಚಾರ ನಿರ್ಮೀಲನೆ ಆದಾಗ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.

ತಹಶೀಲ್ದಾರ್ ಮಂಜುಳ ಎಂ. ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. 

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ದ.ಕ. ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ, ಸರ್ಕಲ್ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ್, ಎಸ್‌ಐ ಸಂತೋಷ್ ಬಿ.ಪಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತಿನ್ ಪ್ರಭು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್ ಕುಮಾರ್ ಸಿ.ಎಂ. ಉಪಸ್ಥಿತರಿದ್ದರು. 

ಕೃಷಿಕರಾದ ಡಿ.ಎಸ್. ಚಂದ್ರಶೇಖರ, ನಿವೃತ್ತ ಸೈನಿಕರಾದ ತಿರುಮಲೇಶ್ವರ ಸಣ್ಣಮನೆ, ದಯಾನಂದ ಪಿ.ಕೆ. ಅವರನ್ನು ಸನ್ಮಾನಿಸಲಾಯಿತು. ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ ವಂದಿಸಿದರು. ಮಮತಾ ಎಸ್.ಕೆ, ಧನಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಮಾಜಿ ಸೈನಿಕರ ಸಂಘ, ಗೃಹ ರಕ್ಷಕ ದಳ, ಎನ್‌ಸಿಸಿ, ಸ್ಕೌಟ್ಸ್ & ಗೈಡ್ಸ್, ಬುಲ್,  ಬುಲ್ ತಂಡಗಳು, ಯುವ ರೆಡ್ ಕ್ರಾಸ್, ಸೇವಾ ದಳ, ಹಾಗೂ ಶಾಲಾ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article