ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಆನೆ ದಿನಾಚರಣೆ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ವಿಶ್ವ ಆನೆ ದಿನಾಚರಣೆ ಕುರಿತು ಕೆವಿಜಿ ಆಯುರ್ವೇದ ಕಾಲೇಜಿನ ಉಪನ್ಯಾಸಕ ಡಾ.ಅವಿನಾಶ್ ಉಪನ್ಯಾಸ ನೀಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ ಮುಸ್ತಫ , ಸುಬ್ರಹ್ಮಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪೈ , ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ ಡಿ.ವಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರಭಾಕರ ರೈ ಪಿ.ಬಿ , ಕೆ.ಪಿ.ಜಗದೀಶ್ , ಪಶು ಸಂಗೋಪನೆ ಇಲಾಖೆ ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು ,ಅರಣ್ಯ ಇಲಾಖೆ ಸಿಬ್ಬಂದಿಗಳಾದ ಸಂದೀಪ್ ,ಪತ್ರಪ್ಪ , ಪ್ರತಾಪ್, ಪ್ರಕಾಶ್ , ಪುರುಷೋತ್ತಮ ಅವರನ್ನು ಸನ್ಮಾನಿಸಲಾಯಿತು.
ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ್ ಎನ್ ಸ್ವಾಗತಿಸಿ, ಧನ್ಯ ಡಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ ನಿರಂಜನ್ ಶೆಟ್ಟಿ , ಕಿರಣ್ ಬಿ ಎಂ ,ಸಂಧ್ಯಾ , ಚೇತನ್ ಮತ್ತಿತರರು ಉಪಸ್ಥಿತರಿದ್ದರು.
ಅರಣ್ಯ ಇಲಾಖೆ ವತಿಯಿಂದ ನಡೆದ ಚಿತ್ರಕಲೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.