ರಸ್ತೆ ದಾಟುತ್ತಿದ್ದಾಗ ಅವಘಡ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು

ರಸ್ತೆ ದಾಟುತ್ತಿದ್ದಾಗ ಅವಘಡ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು


ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಬಸ್‌ವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳೀಯ ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಮಣಿಪಾಲದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಭೆ ಪೂರೈಸಿ, ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಉಡುಪಿ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದು, ಅಲ್ಲಿಂದ ಅವರು ಮನೆಗೆ ಹೋಗಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು.

ಮಾಹಿತಿ ತಿಳಿದು ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.

ಅವರು ಪತಿ ಬಿಜೆಪಿ ಮುಂದಾಳು ಮಂಜುನಾಥ ಕೊಳ ಹಾಗೂ ಈರ್ವರು ಮಕ್ಕಳನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article