ಸೆ.21 ರಂದು ಜೈನ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ

ಸೆ.21 ರಂದು ಜೈನ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ

ಉಜಿರೆ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನಧರ್ಮೀಯ ವಿದ್ಯಾರ್ಥಿಗಳಿಗೆ ಸೆ.21 ರಂದು ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಮತ್ತು ಶ್ರಾವಕರು, ಶ್ರಾವಿಕೆಯರ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸಲಾಗುವುದು ಎಂದು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಿ.ಯು.ಸಿ. ಪದವಿ ತರಗತಿ, ಐ.ಟಿ.ಐ., ಪೊಲಿಟೆಕ್ನಿಕ್, ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಬಸದಿಯಲ್ಲಿ ದೊರಕುವ ನಿಗದಿತ ಅಜಿನಮೂನೆಯಲ್ಲಿ ಸವಿವರ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬೇಕು.

ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 31 ರ ಒಳಗೆ ಕೆ. ಜಯವರ್ಮರಾಜ ಬಳ್ಳಾಲ್, ಅನುವಂಶಿಕ ಮೊಕ್ತೇಸರರು, ರತ್ನತ್ರಯ ಜೈನ ತೀರ್ಥಕ್ಷೇತ್ರ, ಜೈನಪೇಟೆ, ಬೆಳ್ತಂಗಡಿ-574214 ಸಲ್ಲಿಸಬಹುದಾಗಿದೆ.

ಉಭಯ ಜಿಲ್ಲೆಗಳಲ್ಲಿ ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ ರೋಗ ಪೀಡಿತರಿಗೂ ಆರ್ಥಿಕ ನೆರವು ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಮೊಬೈಲ್ ನಂ.: 9448180439 ಸಂಪರ್ಕಿಸಬಹುದಾಗಿದೆ.

ಸೆ.21 ರಂದು ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ದಿವ್ಯ ಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಪ್ರೋತ್ಸಾಹಧನ ವಿತರಿಸಲಾಗುವುದು ಎಂದು ಕೆ. ಜಯವರ್ಮರಾಜ ಬಳ್ಳಾಲ್ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article