SDMಗೆ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ ‘ಇನ್‌ಸ್ಪಾ’ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

SDMಗೆ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ ‘ಇನ್‌ಸ್ಪಾ’ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ


ಉಜಿರೆ: ಭಾರತೀಯ ಶಾಲಾ ಮನೋವಿಜ್ಞಾನ ಸಂಘಟನೆ ವತಿಯಿಂದ ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ದೊರೆತ ಪ್ರತಿಷ್ಠಿತ ‘ಇನ್‌ಸ್ಪಾ’ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿಯನ್ನು ಬುಧವಾರ ಚೆನ್ನೈನಲ್ಲಿ ಎನ್.ಕೆ.ಟಿ. ನೇಶನಲ್ ಮಹಿಳಾ ಕಾಲೇಜಿನಲ್ಲಿ ನಡೆದ ಹದಿನಾರನೆ ‘ಇನ್‌ಸ್ಪಾ’ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಜೈನ್ ಮತ್ತು ಉಪನ್ಯಾಸಕಿ ಅಶ್ವಿನಿ ಸ್ವೀಕರಿಸಿದರು.

ಎಸ್.ಡಿ.ಎಂ. ಕಾಲೇಜಿನ ಮನೋವಿಜ್ಞಾನ ವಿಭಾಗದ ಶೈಕ್ಷಣಿಕ ಗುಣಮಟ್ಟ, ತರಬೇತಿ, ಸಂಶೋಧನಾ ಸಾಧನೆ, ವಿದ್ಯಾರ್ಥಿಕೇಂದ್ರಿತ ಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆ, ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಡೀನ್ ಹಾಗೂ ಎಲ್ಲಾ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗದ ಮುಖ್ಯಸ್ಥರು ಮತ್ತು ಎಲ್ಲಾ ಪ್ರಾಧ್ಯಾಪಕರನ್ನು ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article