ವಿಎಚ್‌ಪಿ ಅಂತಾರಾಷ್ಟ್ರಿಯ ಅಧ್ಯಕ್ಷರು ಧರ್ಮಸ್ಥಳಕ್ಕೆ ಭೇಟಿ

ವಿಎಚ್‌ಪಿ ಅಂತಾರಾಷ್ಟ್ರಿಯ ಅಧ್ಯಕ್ಷರು ಧರ್ಮಸ್ಥಳಕ್ಕೆ ಭೇಟಿ


ಉಜಿರೆ: ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರಿಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಗ್ಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.ಹಿಂದೂ ಧರ್ಮದ ಚಟುವಟಿಕೆಗಳ ಬಗ್ಗೆ ಹಾಗೂ ಧಾರ್ಮಿಕ ವಿಚಾರಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನ ಪ್ರಮುಖರು, ಸಂತರ ಜೊತೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಭೇಟಿ ನೀಡಿರುವ ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.


ಗುರುವಾರ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದುಕೊಂಡು ಡಿ. ಹರ್ಷೆಂದ್ರ ಕುಮಾರ್ ಅವರ ಜೊತೆ ಮಾತುಕತೆ ನಡೆಸಿದರು.

ಮೂಲತಃ ದೆಹಲಿಯವರಾದ ಅಲೋಕ್ ಕುಮಾರ್ ಅವರು ನವದೆಹಲಿಯ ಶಾಸಕರಾಗಿ, ವಿಧಾನಸಭೆ ಉಪಸಭಾಪತಿ ಆಗಿ ಗಮನಾರ್ಹ ಕೆಲಸ ಮಾಡಿದವರು. ದೆಹಲಿ ಹೈಕೋರ್ಟ್ ಹಾಗೂ ಸರ್ವೋಚ್ಛ ನ್ಯಾಯಾಲಯದ ಹಿರಿಯ ವಕೀಲರಾಗಿರುವ ಅವರು, ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಮೈಗೂಡಿಸಿಕೊಂಡವರು. ಆರ್.ಎಸ್.ಎಸ್., ಬಿಜೆಪಿಯಲ್ಲಿ ಹಲವು ರಾಜ್ಯ, ರಾಷ್ಟ್ರಮಟ್ಟದ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ದೆಹಲಿಯ ಆರ್.ಎಸ್.ಎಸ್. ಸಹಸಂಘಚಾಲಕರಾಗಿಯೂ ಕೆಲಸ ಮಾಡಿದ್ದಾರೆ. ಭಾರತೀಯತೆಯನ್ನು ಉತ್ತೇಜಿಸುವ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷರ ಭೇಟಿ ಸಂದರ್ಭ ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ ಮಂದಿರ ಪ್ರಮುಖ್ ಗಿರಿಪ್ರಕಾಶ್  ತಂತ್ರಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ, ಕಡಬ ತಾಲೂಕಿನ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article