ತಂತ್ರಜ್ಞಾನದ ಬದಲಾವಣೆಗೆ ಬೆಳವಣಿಗೆಯೊಂದಿಗೆ ಹೆಜ್ಜೆ ಹಾಕೋಣ: ಪೂರನ್ ವರ್ಮ
ಅವರು ಉಜಿರೆಯ ಶ್ರೀ ಧರ್ಮಸ್ಥಳಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ, ವಿಜ್ಞಾನ ಹಾಗೂ ಗ್ರಂಥಾಲಯ ವಿಭಾಗ ಮತ್ತು ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾರ್ಗದರ್ಶನದಲ್ಲಿ ಮುಂದಿನ ತಲೆಮಾರಿನ ಶೈಕ್ಷಣಿಕ ಕ್ಷೇತ್ರದ ಕೃತಕ ಬುದ್ಧಿಮತ್ತೆ ಆಧಾರಿತ ಬೋಧನೆ, ಸಂಶೋಧನೆ ಮತ್ತು ಆವಿಷ್ಕಾರ ವಿಷಯದಡಿ ಆಯೋಜಿಸಿರುವ ಐದು ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಾಗಾರಕ್ಕೆ ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಸಂಶೋಧನಾ ನಿರ್ದೇಶಕ ಡಾ. ಕೆ. ಸತ್ಯಮೂರ್ತಿ ಚಾಲನೆ ನೀಡಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನಕ್ಕೆ ಅನು ಗುಣವಾಗಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆ ಹಾಗೂ ವಿದ್ಯಾರ್ಥಿಗಳಲ್ಲಿ ಸರ್ವ ತೋಮುಖ ಅಭಿವೃದ್ಧಿಯನ್ನು ಸಾಧಿಸಲು ಪ್ರಸ್ತುತ ಸಂದರ್ಭದಲ್ಲಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಗಾರವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಕಾರ್ಯಗಾರ ಎಲ್ಲಾ ವಿಶ್ವವಿದ್ಯಾಲಯ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸುವ ಅವಶ್ಯಕವಿದೆ. ಕಾರ್ಯಾಗಾರವು ಕೃತಕ ಬುದ್ಧಿಮತ್ತೆ ಆಧಾರಿತ ಬೋಧನೆ, ಸಂಶೋಧನೆ ಹಾಗೂ ಇತ್ತೀಚಿನ ಆವಿಷ್ಕಾರಗಳನ್ನು ಪರಿಚಯಿಸುವುದರ ಜೊತೆಗೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಎಐ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ಅಧ್ಯಾಪಕರಿಗೆ ಒದಗಿಸುವ ಉಪಯೋಗಿ ವೇದಿಕೆಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸಂದೀಪ್ ಆರ್. ಮಾತನಾಡಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಹಾಗೂ ಅಧ್ಯಾಪಕರ ಸರ್ವತೋಮುಖ ಬೆಳವಣಿಗೆಗಾಗಿ ನಾನಾ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ. ಇದರ ಭಾಗವಾಗಿ ಐದು ದಿನಗಳ ಕಾರ್ಯಗಾರವು ಅತ್ಯಂತ ಉಪಯುಕ್ತ ಮತ್ತು ಅತ್ಯವಶ್ಯಕ ಕಾರ್ಯಕ್ರಮವಾಗಿದೆ. ಕಾರ್ಯಗಾರದಲ್ಲಿ ರಾಷ್ಟ್ರೀಯ ಮಟ್ಟದ ವಿವಿಧ ವಿಷಯಗಳ ತಜ್ಞರು ಪಾಲ್ಗೊಂಡು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ ಎಂದರು.
ಕಾರ್ಯಾಗಾರದ ಸಂಯೋಜಕ ಡಾ. ರಜತ ಪಿ. ಶೆಟ್ಟಿ, ಡಾ. ನವೀನ್ ಕುಮಾರ್, ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ. ಎಸ್.ಎನ್ ಕಾಕತ್ಕಾರ್, ಪದವಿ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಶ್ವನಾಥ್ ಪಿ., ಡೀನ್ ಡಾ. ಸೌಮ್ಯ ಬಿ.ಪಿ., ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಸಂತೋಷ್, ಕಾರ್ಯಾಗಾರ ಆಯೋಜನಾ ಸಮಿತಿಯ ಕಾರ್ಯದರ್ಶಿಗಳಾದ ಡಾ. ವಿದ್ಯಾ ಕೆ., ಡಾ. ನಿತ್ಯಾನಂದ ಬಿ. ಡಾ. ಗಿರೀಶ್ ಕುಮಾರ್, ಡಾ. ರವೀಶ್ ಪಡುಮಲೆ, ಡಾ. ತ್ಯಾಗರಾಜ್ ಮತ್ತಿತರರು ಇದ್ದರು.