ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನಡೆಸುವ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಶಾಂತಿವನ ಟ್ರಸ್ಟ್‌ನ ಯೋಗ ನಿರ್ದೇಶಕ ಡಾ. ಶಶಿಕಾಂತ್ ಜೈನ್ ತಿಳಿಸಿದರು.

‘ನಮ್ಮೂರ ಸಂತೆ’ ಎಂಬ ವಿಷಯದಲ್ಲಿ ಅಂಚೆಕಾರ್ಡ್‌ನಲ್ಲಿ ಚಿತ್ರಗಳನ್ನು ರಚಿಸಿ 2027ರ ಮಾರ್ಚ್ 31ರೊಳಗೆ ಕಳುಹಿಸಬೇಕು.

ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗ ಎಂಬ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನಗಳಿರುತ್ತವೆ.

ಸ್ಪರ್ಧೆಗೆ ಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ: ನಿರ್ದೇಶಕರು, ಅಂಚೆ-ಕುಂಚ ವಿಭಾಗ, ಶಾಂತಿವನ, ಧರ್ಮಸ್ಥಳ-574 216.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article