ಮಾದಕ ವಸ್ತು ಸೇವನೆ: ಆರೋಪಿ ಸೆರೆ

ಮಾದಕ ವಸ್ತು ಸೇವನೆ: ಆರೋಪಿ ಸೆರೆ

ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಮದನಿನಗರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೊಹಮ್ಮದ್ ನೌಪಾಲ್ (32) ಎಂದು ಗುರುತಿಸಲಾಗಿದೆ.

ಈತ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದಂತೆ ವರ್ತಿಸುತ್ತಿದ್ದ. ಈತನನ್ನು ಅನುಮಾನದ ದೃಷ್ಟಿಯಿಂದ ಉಳ್ಳಾಲ ಠಾಣಾ ಸಿಹೆಚ್‌ಸಿ ಶಿವನಾಯಕ್ ಮತ್ತು ಆನಂದ ಬಾಡಗಿ ಅವರು ವಶಕ್ಕೆ ಪಡೆದು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತುಗಳ ಸೇವನೆ ಮಾಡಿರುವುದು ದೃಢಪಟ್ಟಿದೆ. 

ಈ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ಬಂಧಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article