ಮಾದಕ ವಸ್ತುಗಳ ಸೇವನೆ: ಮೂವರ ಬಂಧನ
Thursday, August 13, 2026
ಉಳ್ಳಾಲ: ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರನ್ನು ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ
ಬಂಧಿತರನ್ನು ಮಹಮ್ಮದ್ ಹಪೀದ್ ಹಸನ್(23), ಅಬಿಷೇಕ್ (23) ಅಲೇನಾ ಅನೀಲ್ ಡೆನಿಯಲ್ ಎಂದು ಗುರುತಿಸಲಾಗಿದೆ.
ಇವರು ಸೋಮೇಶ್ವರ ಗ್ರಾಮದ ಕುಂಪಾಲ ಜಂಕ್ಷನ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ.ಈ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಎಸ್ಐ ಸಂತೋಷ ಕುಮಾರ ಡಿ ರವರು ಸಿಬ್ಬಂದಿಯವರ ಜೊತೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಮಾದಕ ವಸ್ತುಗಳ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.
ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಅವರು ಮಾದಕ ವಸ್ತುಗಳನ್ನು ಸೇವಿಸದಿರುವುದು ದೃಢಪಟ್ಟಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.