ಜಕ್ರಿಬೆಟ್ಟಿನಲ್ಲಿ ಸೆ.14ರಿಂದ 18ರವರೆಗೆ ‘ಬಂಟ್ವಾಳದ ಹಬ್ಬ’ವಾಗಿ ಗಣೇಶೋತ್ಸವ
ಗುರುವಾರ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತದ ಸುತ್ತೋಲೆ ಹಾಗೂ ಕಾನೂನು ಸುವ್ಯವಸ್ಥೆಯ ನಿಯಮಗಳನ್ನು ಪಾಲಿಸಿಕೊಂಡು ಗಣೇಶೋತ್ಸವವನ್ನು ಆಯೋಜಿಸಲಾಗುವುದು ಎಂದರು.
ಬಂಟ್ವಾಳದ ಗಣೇಶೋತ್ಸವವು ಸರ್ವಧರ್ಮೀಯರನ್ನು ಒಗ್ಗೂಡಿಸುವ ವಿಶಿಷ್ಟ ಉತ್ಸವವಾಗಿ ಬೆಳೆದಿದೆ. ಎಲ್ಲರೂ ಒಂದಾಗಿ ಬೆಸೆಯುವ ಸೌಹಾರ್ದತೆಯ ‘ಬಂಟ್ವಾಳದ ಹಬ್ಬ’ವಾಗಿ ರೂಪುಗೊಂಡಿದೆ ಎಂದ ಅವರು ಮನುಷ್ಯ-ಮನುಷ್ಯರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಆರಂಭಗೊಂಡ ಬಂಟ್ವಾಳದ ಗಣೇಶೋತ್ಸವ ಇಂದು ಜನಾಕರ್ಷಣೆಯ ಉತ್ಸವವಾಗಿ ಬೆಳೆದಿದ್ದು, ಮುಂದಿನ ದಿನಗಳಲ್ಲಿ ‘ಸಾಮರಸ್ಯದ ಬಂಟ್ವಾಳ’ ನಿರ್ಮಾಣಕ್ಕೆ ಪೂರಕವಾದ ನಾಡಹಬ್ಬವಾಗಿ ರೂಪುಗೊಳ್ಳಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ರಮಾನಾಥ ರೈ ಹೇಳಿದರು.
ಸೆ.18ರಂದು ಬೆಳಗ್ಗೆ ಗಣೇಶ ವಿಗ್ರಹ ಪ್ರತಿಷ್ಠೆಯಾದ ಬಳಿಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಡಾ. ಶಿವಪ್ರಸಾದ್ ರೈ, ಮಂಗಳೂರು ಅವರು ಗಣೇಶೋತ್ಸವ ಚಾಲನೆ ನೀಡಲಿದ್ದು, ಸೊಲೂರು ಮಠದ ಶ್ರೀವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಗಣೇಶೋತ್ಸವದ ಐದು ದಿನವೂ ನಿರಂತರವಾಗಿ ಅನ್ನಸಂತರ್ಪಣೆ ನಡೆಯಲಿದ್ದು, ವಿವಿಧ ಮಠಾಧೀಶರು, ಸಚಿವರು, ಧಾರ್ಮಿಕ, ಸಾಮಾಜಿಕ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಭಜನಾ ಸಂಕೀರ್ತನೆ, ನಾಟಕ, ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.
ಸೆ.18ರಂದು ಶೋಭಾಯಾತ್ರೆ:
ಸೆ.18 ರಂದು ಸಂಜೆ 5 ಗಂಟೆಗೆ ಸಂಧ್ಯಾಪೂಜೆ, ವಿಸರ್ಜನಾ ಪೂಜೆ ಬಳಿಕ ಗಣೇಶ ವಿಗ್ರಹದ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ್ ಜೈನ್, ಪದಾಧಿಕಾರಿಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸಂಪತ್ ಕುಮಾರ್ ಶೆಟ್ಟಿ, ಮೋಹನ್ ಚೆಂಡ್ತಿಮಾರ್, ಬೇಬಿಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಬಾಲಕೃಷ್ಣ ಆರ್. ಅಂಚನ್, ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಶೇಖರ ಭಂಡಾರಿ, ಸುರೇಶ್ ಪೂಜಾರಿ ಜಕ್ರಿಬೆಟ್ಟು, ಪದ್ಮನಾಭ ರೈ, ಪ್ರವೀಣ್ ಜಕ್ರಿಬೆಟ್ಟು, ದೇವಪ್ಪ ಕುಲಾಲ್ ಪಂಜಿಕಲ್ಲು, ಸದಾಶಿವ ಬಂಗೇರ, ಸುಧಾಕರ ಶೆಣೈ ಖಂಡಿಗ, ಮನೋಹರ ನೆರಂಬೊಳು, ವೆಂಕಪ್ಪ ಪೂಜಾರಿ ಮೊದಲಾದವರಿದ್ದರು.