ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ವಿಶೇಷ ಗ್ರಾಮ ಸಭೆ
Tuesday, September 8, 2026
ಬಂಟ್ವಾಳ: ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ವಿಶೇಷ ಗ್ರಾಮ ಸಭೆಯು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಡಿ. ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿ.ಎಲ್.ಒ)ಗಳಾದ ವಸಂತಿ ಎಚ್.ಆರ್., ಸುಜಾತಾ ಸಿ.ಎಚ್. ಹಾಗೂ ಜಾನಕಿ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಸಹಾಯಕ ರುಕ್ಮಣ್ಣ ಗೌಡ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರುಗಳಾದ ಸತೀಶ್ ಪೂಜಾರಿ ಕೊಪ್ಪರಿಗೆ, ಶಕೀಲಾ ಕೆ. ಪೂಜಾರಿ, ಡಿ. ತನಿಯಪ್ಪ ಗೌಡ, ಸದಸ್ಯರಾದ ಲತೀಫ್ ನೇರಳಕಟ್ಟೆ, ಧನುಂಜಯ ಗೌಡ ಮತ್ತಿತರರು ಉಪಸ್ಥಿತರಿದ್ದರು.