ರಹಿಮಾನ್ ಹತ್ಯಾ ಪ್ರಕರಣ: ಡಾ. ಪ್ರಭಾಕರ್ ಭಟ್‌ಗೆ ವಿಚಾರಣೆಗಾಗಿ ನೊಟೀಸ್ ಜಾರಿ, ಸೆ.26 ರಂದು ಹಾಜರಾಗಲು ಸೂಚನೆ

ರಹಿಮಾನ್ ಹತ್ಯಾ ಪ್ರಕರಣ: ಡಾ. ಪ್ರಭಾಕರ್ ಭಟ್‌ಗೆ ವಿಚಾರಣೆಗಾಗಿ ನೊಟೀಸ್ ಜಾರಿ, ಸೆ.26 ರಂದು ಹಾಜರಾಗಲು ಸೂಚನೆ


ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಬಳಿ ನಡೆದಿದ್ದ ಅಬ್ದುಲ್ ರೆಹಮಾನ್ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಪೊಲೀಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲ್, ಶಿವಪ್ರಸಾದ್, ಪ್ರದೀಪ್, ಅಭಿನವ್ ರೈ, ತೇಜಾಕ್ಷ ಹಾಗೂ ರಂಜಿತ್ ವಿರುದ್ಧ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್ 28ರಂದು ಬಿ.ಸಿ.ರೋಡಿನಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಪ್ರತಿಭಟನೆ ಆಯೋಜಿಸಿರುವ ಬೆನ್ನಲ್ಲೆ ಡಾ.ಪ್ರಭಾಕರ್ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ.

ಮನೆಯಲ್ಲೇ ವಿಚಾರಣೆ:

ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸತ್ಯಾಂಶಗಳು ಹಾಗೂ ಸನ್ನಿವೇಶಗಳನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ವಿಚಾರಣೆ ನಡೆಸಬೇಕಾಗಿದ್ದು, ಸೆ.26ರಂದು ಕಲ್ಲಡ್ಕದಲ್ಲಿರುವ ತಮ್ಮ ನಿವಾಸದಲ್ಲೇ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ವಿಚಾರಣೆಯ ಸಂದರ್ಭದಲ್ಲಿ ಅಗತ್ಯ ಮಾಹಿತಿಯನ್ನು ಒದಗಿಸಿ ತನಿಖೆಗೆ ಸಹಕರಿಸುವಂತೆಯು ಪೊಲೀಸರು ಡಾ.ಭಟ್ ಅವರಲ್ಲಿ ಕೋರಿದ್ದಾರೆ.

ಡಾ. ಪ್ರಭಾಕರ್ ಭಟ್ ಅವರಿಗೆ ಜಾರಿಗೊಳಿಸಲಾದ ನೋಟಿಸ್ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿದ್ದು, ಪೊಲೀಸರು ವಿಚಾರಣೆಯ ಮೂಲಕ ಕೆಲವು ಅಂಶಗಳನ್ನು ಪರಿಶೀಲಿಸಲು ಮುಂದಾಗಿದ್ದಾರೆ.

2025ರ ಮೇ 27ರಂದು ಬಂಟ್ವಾಳ ತಾಲೂಕಿನ ಕೊಳತ್ತಮಜಲುನಿವಾಸಿ ಅಬ್ದುಲ್ ರೆಹಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಎಂಬವರಿಗೆ ಮಾರಣಾಂತಿಕ ಹಲ್ಕೆ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇದುವರೆಗೆ 23 ಮಂದಿ ಆರೋಪಿಗಳನ್ನು ಹೆಸರಿಸಲಾಗಿದ್ದು, ಈ ಸಂಬಂಧ ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನೂ ಸಲ್ಲಿಸಿದ್ದಾರೆ.

ಆರೋಪಿಗಳ ಪೈಕಿ ಭರತ್ ಕುಮ್ಡೇಲು ಸಹಿತ ಎಂಟು ಮಂದಿಯ ವಿರುದ್ಧ ಪ್ರಕರಣದ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದರ ಬೆನ್ನಲ್ಲೇ ಭರತ್ ಸಹಿತ ಅರು ಮಂದಿಯ ವಿರುದ್ಧ ಗೂಂಡಾ ಕಾಯ್ದೆಯನ್ನು ಜಾರಿಗೊಳಿಸಿದ ಹಿನಗನಲೆಯಲ್ಲಿ ನ್ಯಾಯಾಲಯದ ಜಮೀನು ಮಂಜೂರಾದರೂ ಜೈಲಿನಲಗಲಿ ಉಳಿಯುವಂತಾಗಿತ್ತು.

ಸರಕಾರದ ಈ ನಿಲುವನ್ನು ಖಂಡಿಸಿ ವಿ.ಹಿಂ.ಪ., ಬಜರಂಗದಳ ಬಂಟ್ವಾಳ ಪ್ರಖಂಡ ಸೆ.28 ರಂದು ಬೃಹತ್ ಪ್ರತಿಭಟನೆ ಆಯೋಜಿಸಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಡಾ.ಪ್ರಭಾಕರ ಭಟ್ ಅವರಿಗೆ ನೊಟೀಸ್ ಜಾರಿಗೊಳಿಸಿರುವುದು ಸಂಘಪರಿವಾರ ಸಂಘಟನೆಯ ಮುಖಂಡರು, ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಇದರ ಹಿಂದೆ ವ್ಯವಸ್ಥಿತ ಸಂಚು ನಡೆದಿದೆ ಎಂದು ವಿ.ಹಿಂ.ಪ., ಬಜರಂಗದಳ ಕಿಡಿಕಾರಿದೆ.

ಹಿ.ಜಾ.ವೇ. ಬೆಂಬಲ:

ಸೆ.28 ರಂದು ಬಿ.ಸಿ.ರೋಡಿನಲ್ಲಿ ನಡೆಸಲಿರುವ ಪ್ರತಿಭಟನೆಗೆ ಹಿ.ಜಾ.ವೇ. ಮಂಗಳೂರು ಗ್ರಾಮಾಂತರ ಜಿಲ್ಲೆಯು ಬೆಂಬಲವನ್ನು ವ್ಯಕ್ತಪಡಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article