ನರಸಿಂಹ ಮಾಣಿಗೆ ಮತ್ತೊಮ್ಮೆ ಗಡಿಪಾರು ನೋಟೀಸು ಜಾರಿ

ನರಸಿಂಹ ಮಾಣಿಗೆ ಮತ್ತೊಮ್ಮೆ ಗಡಿಪಾರು ನೋಟೀಸು ಜಾರಿ


ಬಂಟ್ವಾಳ: ಹಿ.ಜಾ.ವೇ.ಯ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಯೋಜಕ ಮಾಣಿ ಗ್ರಾಮದ ನರಸಿಂಹ ಶೆಟ್ಟಿ ಯಾನೆ ನರಸಿಂಹ ಮಾಣಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ಇದೀಗ ಮಂಗಳೂರು ಸಹಾಯಕ ಆಯುಕ್ತರ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ.

ನರಸಿಂಹ ಶೆಟ್ಟಿ ವಿರುದ್ಧ ವಿಟ್ಲ ಪುತ್ತೂರು, ಬಂಟ್ವಾಳ ಹಾಗೂ ಮಂಗಳೂರು ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಕೊಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಕೋಮುಗಲಭೆಗೆ ಪ್ರಚೋದನೆ, ದ್ವೇಷ ಭಾಷಣ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿರುವುದಾಗಿ ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.

ನರಸಿಂಹ ಶೆಟ್ಟಿ ಅವರ ಚಟುವಟಿಕೆಗಳಿಂದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ) ಮತ್ತು (ಬಿ) ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರು ಪ್ರಸ್ತಾವನೆ ಸಲ್ಲಿಸಿದ್ದಾರೆ.

ಈ ಕುರಿತು ತಮ್ಮ ವಿವರಣೆಯೊಂದಿಗೆ ಸೆ.21ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಖುದ್ದಾಗಿ ಹಾಜರಾಗುವಂತೆ ನೋಟೀಸ್‌ನಲ್ಲಿ ಸೂಚಿಸಲಾಗಿದೆ. ನಿಗದಿತ ದಿನಾಂಕದಂದು ಹಾಜರಾಗಿ ವಿವರಣೆ ನೀಡದಿದ್ದಲ್ಲಿ, ಯಾವುದೇ ವಿವರಣೆ ಇಲ್ಲವೆಂದು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನರಸಿಂಹ ಶೆಟ್ಟಿ ಯಾನೆ ಮಾಣಿ ನರಸಿಂಹ ವಿರುದ್ಧ 2003 ರಿಂದ 2026 ರವರೆಗೆ ಒಟ್ಟು 9 ಪ್ರಕರಣಗಳು ದಾಖಲಾಗಿವೆ ಎಂದುನೋಟೀಸಿನಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ವಾರವಷ್ಟೇ ದ.ಕ. ಜಿಲ್ಲೆಯಿಂದ ಹೊರಜಿಲ್ಕೆಗೆ ಗಡಿಪಾರು ಮಾಡುವಂತೆ ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ಅವರು ಸಲ್ಲಿಸಿದ್ದ ಪ್ರಸ್ತಾವನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ನೋಟೀಸ್ ಜಾರಿಗೊಳಿಸಿದ್ದರು. ಬಳಿಕ ಉಚ್ಚ ನ್ಯಾಯಾಲಯದ ರಿಟ್ ಪಿಟಿಷನ್‌ವೊಂದರ ಅನ್ವಯ ಎಸ್ಪಿಯವರು ಈ ನೋಟೀಸನ್ನು ಹಿಂಪಡೆದಿದ್ದರು.

ಇದೀಗ ಮರಸಿಂಹ ಮಾಣಿಯವರನ್ನು ಸಹಾಯಕ ಆಯುಕ್ತರು ಗಡಿಪಾರು ನೋಟೀಸ್ ಜಾರಿಮಾಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article