ಬಸ್ ಇಳಿಯುತ್ತಿದ್ದಾಗ ಕಾರು ಢಿಕ್ಕಿ ಕೂಲಿ ಕಾರ್ಮಿಕನ ಮೃತ್ಯು

ಬಸ್ ಇಳಿಯುತ್ತಿದ್ದಾಗ ಕಾರು ಢಿಕ್ಕಿ ಕೂಲಿ ಕಾರ್ಮಿಕನ ಮೃತ್ಯು

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಬಂಟ್ವಾಳ ತಾಲೂಕಿನ ಬಾಳ್ತಿಲಗ್ರಾಮದ ನಿವಾಸಿ ಹರೀಶ್ ನಾಯ್ಕ (46) ಎಂದು ಗುರುತಿಸಲಾಗಿದೆ.

ಮೇಸ್ತ್ರೀಯಾಗಿರುವ ಅವರು, ಸಂಜೆ ಕೆಲಸ ಮುಗಿಸಿ ಕಲ್ಲಡ್ಕ ಕಡೆಯಿಂದ ಬಸ್‌ನಲ್ಲಿ ಮನೆಗೆ ತೆರಳುತ್ತಿದ್ದು, ದಾಸಕೋಡಿಯಲ್ಲಿ ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಭಾಗದಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಧಾವಿಸಿ ಬಂದ ಕಾರು ಅವರಿಗೆ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ.

ಪರಿಣಾಮ ಹರೀಶ್ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article