ವಕೀಲ ಪ್ರಸಾದ್ ವಿರುದ್ಧ ದೂರು ದಾಖಲು
Wednesday, September 30, 2026
ಬಂಟ್ವಾಳ: ನ್ಯಾಯಾಲಯದ ಪ್ರಕ್ರಿಯೆ, ಪ್ರಕರಣವೊಂದರ ತನಿಖೆಯ ಕುರಿತು ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂದು ಆರೋಪಿಸಿ ಬಿ.ಸಿ.ರೋಡಿನ ಯುವ ನ್ಯಾಯವಾದಿ,ವಿ.ಹಿ.ಪ.,ಬಜರಂಗದಳ ಬಂಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಎಂಬವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಲೂಕಿನ ಬಡಗಬೆಳ್ಳೂರು ನಿವಾಸಿ ಹನೀಫ್ ಯಾನೆ ಮಹಮ್ಮದ್ ಹನೀಫ್ ಎಂಬವರು ದೀರು ನೀಡಿದ್ದು, ಸೆ.೨೮ರಂದು ಬಿ.ಸಿ.ರೋಡ್‌ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಕುಮಾರ್ ಭಾಷಣ ಮಾಡಿದ್ದರು.
ಈ ವೇಳೆ ಅವರು ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಮತ್ತು ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರರ್ಜಿ ದಾಖಲಾಗಿದ್ದು, ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಪೊಲೀಸರು ತಿಳಿಸಿದ್ದಾರೆ.
ದೂರಿನಲ್ಲಿ ಮಾಡಲಾಗಿರುವ ಆರೋಪಗಳು ಹಾಗೂ ಭಾಷಣದಲ್ಲಿ ಮಾಡಲಾಗಿದೆಯೆನ್ನಲಾದ ಹೇಳಿಕೆಗಳ ಕುರಿತು ತನಿಖೆ ನಡೆಸಿ, ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.