ಬಿ. ಜನಾರ್ದನ ಪೂಜಾರಿ ಮನೆಗೆ ಸಿಎಂ ಡಿಕೆಶಿ ಭೇಟಿ
Monday, September 21, 2026
ಬಂಟ್ವಾಳ: ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸಿಗ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ರಾತ್ರಿ ಭೇಟಿ ನೀಡಿ, ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದರು.
ಕಳೆದ ಫೆಬ್ರವರಿಯಲ್ಲಿ ಉಪಮುಖ್ಯಮಂತ್ರಿ ಆಗಿದ್ದ ವೇಳೆಯೂ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದ ವೇಳೆ ಜನಾರ್ದನ ಪೂಜಾರಿ ಅವರು ಉತ್ತಮ ಕೆಲಸ ಮಾಡಿ ನಾಡಿಗೆ ಕೀರ್ತಿ ತರುವಂತೆ ಹಾರೈಸಿದ್ದರು.
ಈ ಸಂದರ್ಭ ಪೂಜಾರಿಯವರ ಮನೆಯ ಸದಸ್ಯರು, ಸಚಿವ ಯು.ಟಿ. ಖಾದರ್, ಮಾಜಿ ಸಚಿವ ಬಿ. ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಆರ್. ಪದ್ಮರಾಜ್, ಪಕ್ಷ ಪ್ರಮುಖರಾದ ಮಿಥುನ್ ರೈ, ಇನಾಯತ್ ಆಲಿ, ಪಿಯುಸ್ ಎಲ್. ರೋಡ್ರಿಗಸ್, ಬೇಬಿ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.
