ಅಪಘಾತ: ಯುವಕ ಸಾವು
Wednesday, September 2, 2026
ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತ ಯುವಕನನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆ ವೇಳೆ ಪಣಕಜೆಯಲ್ಲಿ ಟೆಂಪೋದ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ರಿನ್ಸ್ ಶಿಬಿ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇವರು ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದರು.