ಶ್ರೀ ಕ್ಷೇತ್ರ ಧರ್ಮಸ್ಥಳ ಸೆ.28ರಿಂದ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳ ಸೆ.28ರಿಂದ ಭಜನಾ ಕಮ್ಮಟ


ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನ ಕಮ್ಮಟ ಸೆ. 28ರಿಂದ ಅ. 4ರ ವರೆಗೆ ನಡೆಯಲಿದೆ.

ಸೆ. 28ರಂದು ಬೆಳಗ್ಗೆ 11ಕ್ಕೆ ಧರ್ಮಸ್ಥಳ ದ ಮಹೋತ್ಸವ ಸಭಾಭವನದಲ್ಲಿ ಭಜನ ಕಮ್ಮಟದ ಉದ್ಘಾಟನೆ ನಡೆಯಲಿದ್ದು, ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತಿ ವಹಿಸಲಿದ್ದು, ಶ್ರೀ ಧ. ಮಂ. ಭಜನ ಪರಿಷತ್ ಉಪಾಧ್ಯಕ್ಷರಾದ ಡಾ. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅ. 4ರಂದು ಬೆಳಗ್ಗೆ 11ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಉಪಸ್ಥಿತಿ ವಹಿಸಲಿದ್ದು, ಶಾಸಕ ಹರೀಶ್ ಪೂಂಜಾ, ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಡಾ. ಹೇಮಾವತಿ ವೀ. ಹೆಗ್ಗಡೆ, ಡಿ. ಹಷ್ಸೇಂದ್ರ ಕುಮಾರ್, ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಭಜನ ಕಮ್ಮಟದ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಎ. ವಿ. ಶೆಟ್ಟಿ, ಶ್ರೀ ಧ.ಮಂ. ಪ್ರಾದೇಶಿಕ ಭಜನ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬನ್ನೂರು ಸಹಿತ ಪದಾಧಿಕಾರಿಗಳು ಉಪಸ್ಥಿತರಿರುವರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article