ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲನೇ ದಿನದ ಅಂಗವಾಗಿ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ಕಾರ್ಯಕ್ರಮ ನಡೆಯಿತು.

ಮಣಿಪಾಲದ ಸಂಗೀತ ವಿದುಷಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ನೀಡಿದರು. ಭಜನೆಯ ಸ್ವರ, ಲಯ, ತಾಳ ಹಾಗೂ ಗಾಯನ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿ, ಪ್ರಾಯೋಗಿಕ ತರಬೇತಿಯನ್ನೂ ನಡೆಸಿಕೊಟ್ಟರು.

ಶಿಬಿರಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಿಚಯವನ್ನು ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿ ವೀರು ಶೆಟ್ಟಿ ಅವರು ನೀಡಿದರು.

ಸಾಯಂಕಾಲ ಕಾರ್ಕಳದ ಸಾಲ್ಮರ ಶ್ರೀ ವೆಂಕಟರಮಣ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಿ. ಹರ್ಷೇಂದ್ರ ಕುಮಾರ್ ಹಾಗೂ ಐಶ್ವರ್ಯ ನಿಶ್ಚಲ್ ಅವರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article