ಭಜನಾ ತರಬೇತಿ ಶಿಬಿರ
Wednesday, September 30, 2026
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಸೆ.29 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟದ ಎರಡನೇ ದಿನದ ಶಿಬಿರದಲ್ಲಿ ಸಂಗೀತ ವಿದೂಷಿ ಉಷಾ ಹೆಬ್ಬಾರ್, ಮಣಿಪಾಲ ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಭಜನಾ ಕಮ್ಮಟ ಪರಿಷತ್‌ನ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಉಪಾಧ್ಯಕ್ಷೆ ಹೇಮಾವತಿ ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಐಶ್ವರ್ಯ ನಿಶ್ಚಲ್ ಜೈನ್ ಉಪಸ್ಥಿತರಿದ್ದರು.