ಕಾಸರಗೋಡು ಜಿಲ್ಲಾಧಿಕಾರಿಯಾಗಿ ಬುಡಕಟ್ಟು ಸಮುದಾಯದ ಶ್ರೀಧನ್ಯಾ

ಕಾಸರಗೋಡು ಜಿಲ್ಲಾಧಿಕಾರಿಯಾಗಿ ಬುಡಕಟ್ಟು ಸಮುದಾಯದ ಶ್ರೀಧನ್ಯಾ


ಕಾಸರಗೋಡು: ವಯನಾಡಿನ ಕುರಿಚ್ಯ  ಬುಡಕಟ್ಟು ಸಮುದಾಯಕ್ಕೆ ಸೇರಿದ ಕೇರಳದ ಮೊದಲ ಬುಡಕಟ್ಟು ಮಹಿಳಾ IAS ಅಧಿಕಾರಿ ಶ್ರೀಧನ್ಯಾ ಸುರೇಶ್ ಅವರನ್ನು ಕಾಸರಗೋಡು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಕಾಸರಗೋಡಿನ ನೂತನ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯ ಸುರೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರನ್ನು ವರ್ಗಾವಣೆ ಮಾಡಿ ಕೃಷಿ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಧನ್ಯ, ಈಗ ಆಯಕಟ್ಟಿನ ಮಹತ್ವದ ಗಡಿ ಜಿಲ್ಲೆಯಾದ ಕಾಸರಗೋಡಿನ ಆಡಳಿತದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಶ್ರೀಧನ್ಯಾ ಸುರೇಶ್ ಕೇರಳದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ವಯನಾಡಿನ ಕುರಿಚ್ಯ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ದೇಶದ ಪ್ರತಿಷ್ಠಿತ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಪ್ರವೇಶಿಸಿದ ಕೇರಳದ ಕುರಿಚ್ಯ ಸಮುದಾಯದ ಮೊದಲ ಬುಡಕಟ್ಟು ಮಹಿಳೆ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article