ಬ್ರಹ್ಮಾವರ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಬ್ರಹ್ಮಾವರ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ


ಕುಂದಾಪುರ: ಬ್ರಹ್ಮಾವರ ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತಿ ನರೇಂದ್ರ ಕುಮಾರ್ ಕೋಟ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ಅಕ್ಟೋಬರ್ 4ರಂದು ಸಾಸ್ತಾನದ ಶಿವಕೃಪಾ ಸಭಾ ಭವನದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕೋಟದ ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ನಡೆಯಿತು.

ಆಮಂತ್ರಣ ಪತ್ರಿಕೆಯನ್ನು ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ. ಕುಂದರ್ ಬಿಡುಗಡೆಗೊಳಿಸಿ ಮಾತನಾಡಿ, ಕನ್ನಡ ನಾಡು ನುಡಿ ಸಂಸ್ಕೃತಿಯ ಕುರಿತು ನಾವೆಲ್ಲಾ ಚಿಂತಿಸಬೇಕಾದ ಅಗತ್ಯವಿದೆ. ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಕನ್ನಡಪರ ಕಾರ್ಯಗಳ ಕುರಿತು ನಾವೆಲ್ಲಾ ಕೈ ಜೋಡಿಸೋಣ. ಇಂತಹ ಸಮ್ಮೇಳನಗಳಿಂದ ಹೊಸ ಪ್ರತಿಭೆಗಳಿಗೆ ಅವಕಾಶ ಸಿಗಬೇಕು. ಕನ್ನಡದ ಹೊಸ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆಯಬೇಕು ಎಂದರು.

ತಾಲೂಕು ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ್ ಸಮ್ಮೇಳನಕ್ಕೆ ಎಲ್ಲರ ಸಹಕಾರ ಕೋರಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಸಮ್ಮೇಳನದ ರೂಪು ರೇಷೆಗಳ ಕುರಿತು ಮಾತನಾಡಿದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಅಚ್ಯುತ ಪೂಜಾರಿ, ಜ್ಯೋತಿ ಕೃಷ್ಣ ಪೂಜಾರಿ,ವಿಶ್ವನಾಥ ಖಾರ್ವಿ, ರತ್ನಾ ಜೆ.ರಾಜ್, ಜ್ಯೋತಿ ಉದಯ ಪೂಜಾರಿ, ಲೀಲಾವತಿ ಗಂಗಾಧರ, ರಾಜಶೇಖರ ಹೆಬ್ಬಾರ, ನರಸಿಂಹ ಮೂರ್ತಿ, ರಘು ಮಧ್ಯಸ್ಥ, ಮನೋಹರ ಭಟ್, ಉಪೇಂದ್ರ ಸೋಮಯಾಜ, ಮಹಾಲಕ್ಷ್ಮೀ ಸೋಮಯಾಜಿ, ಸುಮನಾ ಹೇರ್ಳೆ, ಪ್ರಸನ್ನ ತುಂಗಾ, ಪೂರ್ಣಿಮಾ ಅಧಿಕಾರಿ,ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article