ಅಂಗಡಿಯಲ್ಲಿ ಲಕ್ಷಾಂತರ ರೂ. ಕಳವು

ಅಂಗಡಿಯಲ್ಲಿ ಲಕ್ಷಾಂತರ ರೂ. ಕಳವು

ಕುಂದಾಪುರ: ನಂದಿನಿ ಹಾಲು ಮಾರಾಟ ಅಂಗಡಿಯ ಮೇಲ್ಛಾವಣಿಯ ತಗಡನ್ನು ಒಡೆದು ಒಳನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ನಗರದ ಬಸ್ರೂರು ಮೂರ್ಕೈ ಎಂಬಲ್ಲಿನ ಪ್ರದೇಶದಲ್ಲಿ ನಡೆದಿದೆ. 

ಅಂಗಡಿಯ ಕ್ಯಾಶ್ ಡ್ರಾವರ್‌ನಲ್ಲಿದ್ದ ಸುಮಾರು ರೂ.1.10 ಲಕ್ಷ  ನಗದು ಹಣವನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ. 

ವಡೇರಹೋಬಳಿ ಗ್ರಾಮದ ನಿವಾಸಿ ಸುರೆಂದ್ರ (43) ಅವರು ಬಸ್ರೂರು ಮೂರ್ಕೈಯಲ್ಲಿ ನಂದಿನಿ ಹಾಲಿನ ಅಂಗಡಿ ನಡೆಸುತ್ತಿದ್ದು, ಸೆಪ್ಟೆಂಬರ್ 6ರಂದು ರಾತ್ರಿ ಸುಮಾರು 10.30 ಗಂಟೆಗೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು.

ಸೆಪ್ಟೆಂಬರ್ 7ರಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಅಂಗಡಿ ತೆರೆದು ಒಳಗೆ ಹೋಗಿ ಪರಿಶೀಲಿಸಿದಾಗ ಅಂಗಡಿಯ ಮೇಲ್ಛಾವಣಿಯ ತಗಡು ಒಡೆದಿರುವುದು ಹಾಗೂ ಕ್ಯಾಶ್ ಡ್ರಾವರ್‌ನಲ್ಲಿದ್ದ  ಹಣ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.

ರಾತ್ರಿ ವೇಳೆ ಯಾರೋ ಕಳ್ಳರು ಅಂಗಡಿಯ ಮೇಲ್ಛಾವಣಿಯ ಶೀಟನ್ನು ಒಡೆದು ಒಳನುಗ್ಗಿ, ಕ್ಯಾಶ್ ಡ್ರಾವರ್‌ನಲ್ಲಿದ್ದ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 75/2026ರಂತೆ ಬಿಎನ್‌ಎಸ್ ಕಲಂ 331(4) ಮತ್ತು 305 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article