ಕಾರು-ಟೆಂಪೋ ನಡುವೆ ಅಪಘಾತ: ಮಹಿಳೆ ಸಾವು
ಮಾಣಿ: ಆಲ್ಟೋ ಕಾರು ಮತ್ತು ಟೆಂಪೋ ಪಿಕಪ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಗಂಭೀರ ಗಾಯಗೊಂಡು, ಓರ್ವ ಮಹಿಳೆ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಹಳೀರ ಫ್ಲೈ ಓವರ್ ಬಳಿ ನಡೆದಿದೆ.
ಮಡಿಕೇರಿ ನಿವಾಸಿ ನಫೀಸಾ (55) ಮೃತಪಟ್ಟ ಮಹಿಳೆ.
ಚಾಲಕ ಸೇರಿ 5 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ನಾಲ್ಕು ಹೆಂಗಸರು ಹಾಗೂ ಚಾಲಕ ಕಾರಿನಲ್ಲಿದ್ದ. ಉಮ್ರಾ ತರಗತಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.
ಪುತ್ತೂರು, ಮಡಿಕೇರಿ ಮೈಸೂರು ರಸ್ತೆಗೆ ಪ್ರವೇಶ ಮಾಡಬೇಕಾದ ಹಳೀರದ ಸರ್ವಿಸ್ ರಸ್ತೆಯು ಗೊಂದಲಗಳಿಂದ ಕೂಡಿದ್ದು, ಹೆಚ್ಚು ಅಪಘಾತಗಳು ನಡೆಯಲು ಕಾರಣವಾಗುತ್ತಿದೆ. ಹೊರಗಿನಿಂದ ಬಂದವರಿಗೆ ಈ ಸರ್ವಿಸ್ ರಸ್ತೆಯು ಮಡಿಕೇರಿ ಮೈಸೂರು ಮಹಾನಗರಕ್ಕೆ ಪ್ರವೇಶ ರಸ್ತೆ ಎಂದು ಸರಿಯಾಗಿ ತಿಳಿಯದೆ ವಾಹನ ಚಾಲನೆಯಲ್ಲಿ ಗೊಂದಲ ಉಂಟಾಗುತ್ತಿರುವುದು ದಿನೇ ಸಾಮಾನ್ಯವಾಗಿದೆ. ಕಿರಿದಾದ ಪ್ರವೇಶ ರಸ್ತೆಯು ಸರಿಯಾಗಿ ಗೋಚರಿಸದೇ ಇರುವುದು ಮತ್ತು ಯಾವುದೇ ಸೂಚನಾ ಫಲಕ ಕೂಡಾ ಇಲ್ಲದೇ ಇರುವುದು ಹಲವಾರು ಗೊಂದಲಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರ ಆರೋಪ ಕೇಳಿ ಬಂದಿದೆ.
ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.