ಸೆ.14: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರದಲ್ಲಿ ನೂರ ಎಂಟು ನಾರಿಕೇಳ ಗಣಪತಿ ಹವನ
Saturday, September 12, 2026
ಮಂಗಳೂರು: ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸೆ.14 ರಂದು ಶ್ರೀ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 10.30ರಿಂದ ಲೋಕಕಲ್ಯಾಣಾರ್ಥವಾಗಿ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಮಾರ್ಗದರ್ಶನದಲ್ಲಿ 108 ನಾರಿಕೇಳ ಗಣಪತಿ ಹವನ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಗಣಪತಿ ಹವನದ ಪೂರ್ಣಾಹುತಿ ಹಾಗೂ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.
ಅಂದು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ. ಈ ದೇವತಾ ಕಾರ್ಯದಲ್ಲಿ ಭಗವದ್ಭಕ್ತರೆಲ್ಲರೂ ಪಾಲ್ಗೋಳಬೇಕೆಂದು ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಕೆ.ಸಿ. ನಾಕ್ ಪ್ರಕಟಣೆಯಲ್ಲಿ ವಿನತಿಸಿಕೊಂಡಿದ್ದಾರೆ.
