ಕೊಯ್ಲ 300 ಕೋಟಿ ರೂ. ವೆಚ್ಚದ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಸಜ್ಜು: ಸಚಿವ ಸಿ.ಪುಟ್ಟರಂಗ ಶೆಟ್ಟಿ

ಕೊಯ್ಲ 300 ಕೋಟಿ ರೂ. ವೆಚ್ಚದ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಸಜ್ಜು: ಸಚಿವ ಸಿ.ಪುಟ್ಟರಂಗ ಶೆಟ್ಟಿ


ಮಂಗಳೂರು: ಕಡಬ ತಾಲೂಕಿನ ಕೊಯ್ಲದಲ್ಲಿ ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ನೂತನ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಸಜ್ಜುಗೊಂಡಿದ್ದು, ಸಿಬ್ಬಂದಿ ಮತ್ತು ಪ್ರಾಧ್ಯಾಪಕರ ನೇಮಕಾತಿ ಈಗಾಗಲೇ ನಡೆದಿದ್ದು, ಭಾರತೀಯ ಪಶುವೈದ್ಯಕೀಯ ಪರಿಷತ್ತು ಅನುಮತಿ ದೊರೆತ ತಕ್ಷಣ 2026-27 ಸಾಲಿನಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಾರಂಭವಾಗಲಿದೆ ಎಂದು ಕರ್ನಾಟಕದ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ.ಪುಟ್ಟರಂಗ ಶೆಟ್ಟಿ ತಿಳಿಸಿದ್ದಾರೆ.

ನಗರದ ಕೊಡಿಯಾಲ್ಬೈಲ್ನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಕಟ್ಟಡ ‘ಪಶುಪಾಲನಾ ಭವನ’ವನ್ನು ಉದ್ಘಾಟಿಸಿ ಮಾತನಾಡಿದರು. 

ಬೆಳಗಾವಿಯ ಅಥಣಿಯಲ್ಲಿ ನೂತನ ಪಶುವೈದ್ಯಕೀಯ ಈಗಾಗಲೇ ಉದ್ಘಾಟನೆಗೊಂಡಿದೆ ಎಂದರು. ಪಶುಪಾಲನ ಇಲಾಖೆ ರೈತರ , ಬಡವರ, ಶೋಷಿತರ , ಕಾರ್ಮಿಕರ ಪರ ಇರುವ ಇಲಾಖೆಯಾಗಿದೆ. ಮಂಗಳೂರಿನಲ್ಲಿ ಇದೀಗ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 4.1 ಕೋಟಿ ವೆಚ್ಚದಲ್ಲಿ ಪಶುಪಾಲನಾ ಭವನ ಅತ್ಯಂತ ಸುಂದರವಾಗಿ ನಿರ್ಮಾಣಗೊಂಡಿದೆ ಎಂದು ಶ್ಲಾಘಿಸಿದರು.

ದ.ಕ. ಜಿಲ್ಲೆಯಲ್ಲಿ ಇಲಾಖೆಯ ವಿವಿಧ ಹಂತದ 107 ಪಶುವೈದ್ಯಕೀಯ ಸಂಸ್ಥೆ ಹಾಗೂ ೯ ಸಂಚಾರಿ ಪಶುಚಿಕಿತ್ಸಾ ಘಟಕ ಹೊಂದಿದ್ದು, ರೈತರ ಮನೆಬಾಗಿಲಿಗೆ ಪಶುವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ನುಡಿದರು. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 21ನೇ ಜಾನುವಾರು ಗಣತಿಯನ್ವಯ 3.80 ಲಕ್ಷ ಜಾನುವಾರುಗಳು ಹಾಗೂ 412 ಲಕ್ಷ ಕೋಳಿಗಳು ಇವೆ. ಜಿಲ್ಲೆಯಲ್ಲಿ ಇಲಾಖೆಯ ವಿವಿಧ ಹಂತದ 107 ಪಶುವೈದ್ಯಕೀಯ ಸಂಸ್ಥೆ ಹಾಗೂ 9 ಸಂಚಾರಿ ಪಶುಚಿಕಿತ್ಸಾ ಘಟಕ ಹೊಂದಿದ್ದು, ರೈತರ ಮನೆಬಾಗಿಲಿಗೆ ಪಶುವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಮಾತನಾಡಿ ಪಶುಸಖಿಯರು ಅತ್ಯಂತ ಕಡಿಮೆ ವೇತನಕ್ಕೆ ಉತ್ತಮ ಸೇವೆಯನ್ನು ಒದಗಿಸುತ್ತಿದ್ದಾರೆ, ಅವರ ವೇತನ ಏರಿಕೆ ಅಗತ್ಯ ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು. 

ಗೋಸಂತತಿ ಹೆಚ್ಚಿಸುವ ನಿಟ್ಟಿನಲ್ಲಿ ಇವತ್ತು ಯೋಜನೆ ರೂಪಿಸಬೇಕಾಗಿದೆ ಎಂದು ಹೇಳಿದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡದ ಗುತ್ತಿಗೆದಾರ ಜಲೀಲ್, ವಿದ್ಯುತ್ ಗುತ್ತಿಗೆದಾರ ಗುರುರಾಜ್, ಆರ್ಕಿಟೆಕ್ ಸತೀಶ್ ನಾಯಕ್, ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಆರ್. ವೇಣುಗೋಪಾಲ್ ಅವರನ್ನು ಸನ್ಮಾನಿಸಲಾಯಿತು. 

ದ.ಕ. ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಮಾಜಿ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ದ.ಕ. ಜಿಲ್ಲಾ ಕಾಂಗ್ರೆಸ್ನ ನಿಯೋಜಿತ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಆಯುಕ್ತ ಲಿಂಗರಾಜ ಎಸ್‌ಎಸ್, ನಿರ್ದೇಶಕರಾದ ಡಾ.ಪಿ.ಶ್ರೀನಿವಾಸು ಉಪಸ್ಥಿತರಿದ್ದರು. 

ದ.ಕ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಎನ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. 

ಡಾ.ಉದಯ್ ಕುಮಾರ್ ಶೆಟ್ಟಿ ಮತ್ತು ಡಾ.ಅರುಣ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article