ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ

ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ


ಮಂಗಳೂರು: ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಪದಾಧಿಕಾರಿಗಳನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

ವೆಂಕಟೇಶ್ ಪ್ರಸಾದ್ ರವರು ಮಂಗಳೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಆಸಕ್ತರಗಿದ್ದು ಸೂಕ್ತ ಸ್ಥಳವನ್ನು ನಿಗದಿಪಡಿಸಲು ಅತೀ ಶೀಘ್ರದಲ್ಲಿ ಮಂಗಳೂರಿಗೆ ಭೇಟಿ ನೀಡುವ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು, ಮಂಗಳೂರಿನಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ರವರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಯೋಜನೆ ಬಗ್ಗೆ ಚರ್ಚಿಸುದಾಗಿ ತಿಳಿಸಿದರು. ಮಂಗಳೂರಿನಲ್ಲಿ ಎಲ್ಲಾ ರೀತಿಯ ಸಂಪರ್ಕ ಜಾಲ ಹೊಂದಿದ್ದು ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಅನ್ನು ನಿರ್ಮಿಸಲು ಮಂಗಳೂರು ಸೂಕ್ತ ಸ್ಥಳವಾಗಿದ್ದು ಇದರ ಪ್ರಯೋಜನವನ್ನು ಪಡೆಯಲು  ಏSಅಂ ಮುಂದಾಗಿದ್ದು ಕೂಡಲೇ ಕಾರ್ಯರೂಪಕ್ಕೆ ತರುವ ಸಕಲ ಪ್ರಯತ್ನ ಮಾಡುವುದಾಗಿ ತಿಳಿಸಿದರು ಹಾಗೂ ಇದಕ್ಕೆ ಬೇಕಾಗುವ ಎರಡು ಸ್ಥಳವನ್ನು ಈಗಾಗಲೇ ಗುರುತಿಸಲಾಗಿದ್ದು ಸ್ಥಳ ಪರೀಕ್ಷಿಸಲು ಆಗಮಿಸುವಂತೆ ಮೂಡ ಅಧ್ಯಕ್ಷರು ವಿನಂತಿಸಿದರು.

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಗೊಂಡಲ್ಲಿ ಕರಾವಳಿ ಭಾಗದ ಕ್ರೀಡಾಪಟುಗಳಿಗೆ ಹಾಗೂ ಕ್ರಿಕೆಟ್ ಅಭಿಮಾನಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿದ್ದು, ನಗರದ ಕ್ರೀಡಾ ಮೂಲಸೌಕರ್ಯಕ್ಕೆ ಹಾಗೂ ಪ್ರವಾಸೋದ್ಯಮಕ್ಕೆ ಮತ್ತಷ್ಟು ಬಲ ಬರಲಿದೆ.

ಅಸೋಸಿಯೇಶನ್ ಖಜಾಂಚಿ  ಬಿ.ಎನ್, ಮಧುಕರ್, ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಪರಿಣಿತ, ಅನುಪ್ ಶ್ರೀಧರ್ ಮೊದಲಾದವರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article