ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭ
Tuesday, September 29, 2026
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವನ್ನು ದಿನಾಂಕ ಅಕ್ಟೋಬರ್ 1 ರ ಗುರುವಾರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಉದ್ಘಾಟಿಸಲಿದ್ದಾರೆ. ಭಾರತೀಯ ರೆಡ್ ಕ್ರಾಸ್ನ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಸಿ. ಎ. ಶಾಂತಾರಾಮ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯವಂತ ನಾಯಕ್ ಅವರು ವಹಿಸಲಿದ್ದಾರೆ. ವಿದ್ಯಾರ್ಥಿ ಪರಿಷತ್ತಿನ ಉಪ ನಿರ್ದೇಶಕರಾದ ಪ್ರೊ. ರಾಮಕೃಷ್ಣ ಬಿ.ಎಂ., ಸೇರಿದಂತೆ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.