‘ಸಹಕಾರಿ ರತ್ನ’ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯಕ್ಕಾಗಿ ವಿಶೇಷ ಸಾಮೂಹಿಕ ಪ್ರಾರ್ಥನೆ
ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಜ್ಯೋತಿಷ್ಯ ವಿದ್ವಾನ್ ಕೊರಂಗಪಾಡಿ ಕುಮಾರ ಗುರು ತಂತ್ರಿ ಅವರ ನೇತೃತ್ವದಲ್ಲಿ, ಪ್ರಧಾನ ಅರ್ಚಕರಾದ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರ ಉಪಸ್ಥಿತಿಯಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ಹಾಗೂ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಪು ಸಿಎ ಬ್ಯಾಂಕ್ ಅಧ್ಯಕ್ಷ ಕಾಪು ದಿವಾಕರ್ ಶೆಟ್ಟಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ನವೋದಯ ಸ್ವಸಹಾಯ ಗುಂಪುಗಳ ಮೇಲ್ವಿಚಾರಕ ಹರಿನಾಥ್, ಸಹಾಯಕ ಮೇಲ್ವಿಚಾರಕ ಕೃಷ್ಣ, ಅನಿತಾ ಉದಯ್ ಕುಮಾರ್ ಸೇರಿದಂತೆ ನವೋದಯ ಸ್ವಸಹಾಯ ಗುಂಪುಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಸರ್ವತೋಮುಖ ಕ್ಷೇಮಕ್ಕಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು