ಯೂಟ್ಯೂಬರ್ಗಳನ್ನು ವಶಕ್ಕೆ ಪಡೆದ ಪೊಲೀಸರು
Sunday, September 20, 2026
ಮಂಗಳೂರು: ಧರ್ಮಸ್ಥಳದ ಬಂಗ್ಲಗುಡ್ಡೆಯಲ್ಲಿ ಮತ್ತೇ ಯೂಟ್ಯೂಬರ್ಗಳ ಆಟಾಟೋಪ ಹೆಚ್ಚಾಗಿದ್ದು, ಬಂಗ್ಲೆಗುಡ್ಡೆಗೆ ಅಕ್ರಮ ಪ್ರವೇಶ ಮಾಡಿದ ಯೂಟ್ಯೂಬರ್ಗಳನ್ನು ಧರ್ಮಸ್ಥಳ ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಗೆ ಅಕ್ರಮವಾಗಿ ಪ್ರವೇಶ ಮಾಡಿ ವಿಡಿಯೋ ಚಿತ್ರೀಕರಣ ಮಾಡಲು ಮುಂದಾದ ಅಭಿಷೇಕ್ ಮತ್ತು ಶ್ರೇಯಸ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಗ್ಲೆಗುಡ್ಡೆಯು ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಸೇರಿದ ಮೀಸಲು ಅರಣ್ಯ ಪ್ರದೇಶವಾಗಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಧರ್ಮಸ್ಥಳ ಪೊಲೀಸರು ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದಾರೆ.