ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್‌ನ ಚುನಾವಣೆ ನಡೆಸಲಾಯಿತು. 

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿಎಸ್ಸಿ ವಿದ್ಯಾರ್ಥಿ ಸೃಜನ್, ಉಪಾಧ್ಯಕ್ಷರಾಗಿ ತೃತೀಯ ಬಿಬಿಎ ವಿದ್ಯಾರ್ಥಿ ಅಕ್ಷಯ್ ಆರ್., ಸಹಾಯಕ ಕಾರ್ಯದರ್ಶಿಯಾಗಿ ತೃತೀಯ ಬಿಎ ವಿದ್ಯಾರ್ಥಿನಿ ರಂಜಿತಾ ಎಚ್.ಐ., ಲಲಿತಕಲಾ ಸಂಘದ ಕಾರ್ಯದರ್ಶಿಯಾಗಿ ತೃತೀಯ ಬಿಕಾಂ ವಿದ್ಯಾರ್ಥಿ ಚರಣ್, ಲಲಿತಕಲಾ ಸಂಘದ ಸಹಾಯಕ ಕಾರ್ಯದರ್ಶಿಯಾಗಿ ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಶ್ರಾವ್ಯ ಎನ್. ಶೆಟ್ಟಿ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಡಾ. ಜಯರಾಜ್ ಎನ್., ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಪ್ರೊ. ರಾಮಕೃಷ್ಣ ಬಿ.ಎಂ., ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್, ವಿದ್ಯಾರ್ಥಿ ಕ್ಷೇಮಪಾಲನಾ ಸಂಘದ ಉಪನಿರ್ದೇಶಕ ಪ್ರೊ. ಕೆ.ಎಸ್. ಸುಬ್ರಹ್ಮಣ್ಯ ಭಟ್ ಸೇರಿದಂತೆ ಕಾಲೇಜಿನ ವಿವಿಧ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article