ರಥಬೀದಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸ ಅವರು ಭಾಗವಹಿಸಿ, ಕಾನೂನು ಅರಿವಿನ ಅಗತ್ಯದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ತಡೆ ಭಿತ್ತಿಪತ್ರವನ್ನು ಅನಾವರಣಗೊಳಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ನ್ಯಾಯವಾದಿ ಮಾನಸ ಹೆಗ್ಡೆ ಅವರು ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು. ದುಡಿಯುವ ಮಹಿಳೆಯರಿಗೆ ಈ ಕಾಯ್ದೆಯ ಬಗೆಗಿನ ಅರಿವು ಇರಬೇಕೆಂದು ತಿಳಿಸಿದರು.
ಉಪಮುಖ್ಯ ಕಾನೂನು ನೆರವು ಅಭಿರಕ್ಷಕ ಗೋಪಾಲಕೃಷ್ಣ ಶೆಟ್ಟಿ ಅವರು ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅಧ್ಯಕ್ಷತೆಯನ್ನು ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕ ದೇವಿಪ್ರಸಾದ್ ಉಪಸ್ಥಿತರಿದ್ದರು.
ಆಂತರಿಕ ದೂರು ಸಮಿತಿಯ ಸಂಚಾಲಕಿ ಸುವರ್ಣಮಾಲಿನಿ ಬಿ. ಸ್ವಾಗತಿಸಿದರು. ವಿದ್ಯಾರ್ಥಿನಿ ಚಂದನಾ ಪ್ರಾರ್ಥಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಸಂಯೋಜಕಿ ಮತ್ತು ಆಂತರಿಕ ದೂರು ಸಮಿತಿಯ ಸದಸ್ಯೆ ಡಾ. ಜ್ಯೋತಿಪ್ರಿಯ ವಂದಿಸಿದರು. ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ವತ್ಸಲಾ ಪಿ. ಕಾರ್ಯಕ್ರಮ ನಿರೂಪಿಸಿದರು.