ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಹೊಸ ಶಕೆ: ಮಮತಾ ಗಟ್ಟಿ
ಅವರು ಸೋಮವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಂಪುಟದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಭಿನಂದನರ್ಹರು. ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಮಾನ್ಯತೆಯ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಹಲವು ಮೂಲಸೌಕರ್ಯಕ್ಕೆ ಆದ್ಯತೆ, ವಿಶ್ವ ಮಟ್ಟದ ಕರಾವಳಿ ಪ್ರವಾಸೋದ್ಯಮಕ್ಕೆ ಯೋಜನೆ, ಆರೋಗ್ಯ, ಕ್ರೀಡೆ, ಮೀನುಗಾರಿಕೆ ಸೇರಿದಂತೆ ಹಲವು ಕ್ಷೇತ್ರದ ಯೋಜನೆಗೆ ಅನುದಾನ ನೀಡಲು ತೀರ್ಮಾಣಿಸಲಾಗಿದೆ. ಈ ಮೂಲಕ ಕರಾವಳಿ ಕರ್ನಾಟಕವನ್ನು ಎಲ್ಲ ರೀತಿಯಲ್ಲೂ ಪ್ರಗತಿಗೆ ಪೂರಕ ವಾತಾವರಣ ಸೃಷ್ಟಿಸುವ ಸಂಕಲ್ಪ ಮಾಡಲಾಗಿದೆ. ಇವು ಕರ್ನಾಟಕ ಅಭಿವೃದ್ಧಿ ಪರ, ಸಾಮಾನ್ಯರ ಪರವಾಗಿ ಕೆಲಸ ಮಾಡುತ್ತಿದೆ, ಐತಿಹಾಸಿಕ ತೀರ್ಮಾಣದ ಮೂಲಕ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.
ಸರ್ಕಾರ ಕೈಗೊಂಡ ಯೋಜನೆ, ನಿರ್ಧಾರಗಳ ಬಗ್ಗೆ ಅಪಪ್ರಚಾರ ಮಾಡುವವರು ಮಗದೊಮ್ಮೆ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾಣಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವಧರ್ಮಕ್ಕೂ ಅನುದಾನ ನೀಡಲಾಗಿದೆ ಎಂದರು.
ಪ್ರಮುಖರಾದ ಸುರೇಖಾ, ಚಂದ್ರಕಲಾ, ಶಾಂತಳಾ ಗಟ್ಟಿ, ಅಮಿತಾ, ವೃಂದಾ ಪೂಜಾರಿ, ಚಂದ್ರಕಲಾ ಜೋಗಿ, ಚಂದ್ರಿಕಾ ರೈ, ಗೀತಾ, ಸ್ವರೂಪ ಗಟ್ಟಿ ಮತ್ತಿತರರು ಇದ್ದರು.