ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಾ ಅನ್ವೇಷಣೆ ಕಾರ್ಯಕ್ರಮ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್, ಕಳೆದ 50-60 ವರ್ಷಗಳಿಂದ ಲಲಿತಕಲಾ ಸಂಘದ ವತಿಯಿಂದ ಪ್ರತಿಭಾ ಅನ್ವೇಷಣೆ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ. ಇದುವರೆಗೂ ಸಾಕಷ್ಟು ಪ್ರತಿಭಾನ್ವಿತರು, ಕಲಾವಿದರ ಕಲಾ ಪ್ರದರ್ಶನಕ್ಕೆ ಈ ಕಾಲೇಜು ವೇದಿಕೆ ಕಲ್ಪಿಸಿಕೊಟ್ಟಿದೆ. ಇಂದು ಮೊಬೈಲ್‌ನಿಂದಾಗಿ ಯುವ ಜನರ ಬದುಕು ಏಕತಾನತೆಯಿಂದ ಕೂಡಿದೆ. ಅದನ್ನು ಹೋಗಲಾಡಿಸಲು ಇದೊಂದು ಉತ್ತಮ ಅವಕಾಶವಾಗಿದ್ದು, ಇದನ್ನು ಸದ್ವಿನಿಯೋಗ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ವಿದ್ಯಾರ್ಥಿಗಳು ಬದುಕಿನಲ್ಲಿ ತಮ್ಮ ಅಸ್ಥಿತ್ವವನ್ನು ಅನ್ವೇಷಣೆ ಮಾಡುವುದು ಅಗತ್ಯವಾಗಿದೆ. ಕೇವಲ ಹಣ ಗಳಿಕೆ ಮಾತ್ರವೇ ಯಶಸ್ಸಲ್ಲ. ನಾವು ಮಾಡುವ ಪ್ರತಿ ಕೆಲಸದಲ್ಲೂ ಸಂತೋಷ ಪಡೆಯಬೇಕು. ಆ ಮೂಲಕ ತನ್ನನ್ನು ತಾವು ಆವಿಷ್ಕರಿಸಿಕೊಳ್ಳಬೇಕಿದೆ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್‌ನ ಸಹನಿರ್ದೇಶಕ ಪ್ರೊ. ರಾಮಕೃಷ್ಣ ಬಿ.ಎಂ., ಲಲಿತಕಲಾ ಸಂಘದ ಸಹನಿರ್ದೇಶಕಿ ಡಾ. ನಾಗರತ್ನ ಕೆ.ಎ., ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.