ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆ: ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿ ಸಮರ್ಥ್ ಶೆಟ್ಟಿಗೆ ಚಿನ್ನದ ಪದಕ
Wednesday, September 2, 2026
ಮಂಗಳೂರು: ವಿದ್ಯಾಭಾರತಿ ಕರ್ನಾಟಕದ ವತಿಯಿಂದ ಬೀದರ್‌ನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶಕ್ತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ಶೆಟ್ಟಿ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ಗೆದ್ದಿದ್ದಾರೆ.
ಈ ಸಾಧನೆಯೊಂದಿಗೆ ಸಮರ್ಥ್ ಶೆಟ್ಟಿ ಅವರು ಮುಂದಿನ ತಿಂಗಳು ತೆಲಂಗಾಣದಲ್ಲಿ ನಡೆಯಲಿರುವ ಕ್ಷೇತ್ರೀಯ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ಸುರೇಖಾ ಆರ್. ಭಟ್ ಅಭಿನಂದಿಸಿದ್ದಾರೆ. ಅಲ್ಲದೆ, ಮುಂದಿನ ಕ್ಷೇತ್ರೀಯ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.